ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟಿನ್‌ ಕ್ಯಾಷಿಯರ್‌ಗೆ ಲೈಂಗಿಕ ಕಿರುಕುಳ: ದೂರು ದಾಖಲು

Last Updated 6 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇಂದಿರಾ ಕ್ಯಾಂಟಿನ್‌ನ ಮಹಿಳಾ ಕ್ಯಾಷಿಯರ್‌ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕ್ಯಾಂಟಿನ್‌ನ ಮೇಲಧಿಕಾರಿ ಸತೀಶ್ ವಿರುದ್ಧ ಬಂಡೆಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

‘ನನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಮಾತ್ರ ನಿನ್ನನ್ನು ಕೆಲಸದಲ್ಲಿ ಮುಂದುವರಿಸುತ್ತೇನೆ. ಇಲ್ಲವಾದರೆ, ಬೇರೆಯವರನ್ನು ನಿನ್ನ ಜಾಗಕ್ಕೆ ನೇಮಿಸುತ್ತೇನೆ’ ಎಂದು ಸತೀಶ್ ಕಿರುಕುಳ ನೀಡುತ್ತಿರುವುದಾಗಿ ಸಂತ್ರಸ್ತೆ ಶುಕ್ರವಾರ ದೂರು ಕೊಟ್ಟಿದ್ದಾರೆ.

ಲೈಂಗಿಕ ದೌರ್ಜನ್ಯ (ಐಪಿಸಿ 354ಎ), ಉದ್ದೇಶ ಪೂರ್ವಕವಾಗಿ ಶಾಂತಿ ಕದಡುವುದು (ಐಪಿಸಿ 504) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪಗಳಡಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

‘ಭಾರತೀಯ ಸೇನೆಯಲ್ಲಿದ್ದ ಸತೀಶ್, ಎರಡು ವರ್ಷಗಳ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು. ಬಂಡೆಪಾಳ್ಯ ಸೇರಿದಂತೆ ಸುತ್ತಮುತ್ತಲ ಆರು ಇಂದಿರಾ ಕ್ಯಾಂಟಿನ್‌ಗಳ ಉಸ್ತುವಾರಿಯನ್ನು ಅವರು ನೋಡಿಕೊಳ್ಳುತ್ತಿದ್ದರು. ದೂರು ದಾಖಲಾದ ಬಳಿಕ, ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

‘ಹೋಟೆಲ್‌ನಲ್ಲಿ ಕಿರುಕುಳ ನೀಡುವುದು ಮಾತ್ರವಲ್ಲದೆ, ಪ್ರತಿ ರಾತ್ರಿ ಕರೆ ಮಾಡಿ ಕೆಟ್ಟದಾಗಿ ಮಾತನಾಡುತ್ತಿದ್ದ. ಇತ್ತೀಚೆಗೆ ನನ್ನ ಪತಿಗೂ ಕರೆ ಮಾಡಿ, ‘ನಿಮ್ಮ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ. ಆಕೆಗೆ ಬುದ್ಧಿ ಹೇಳಿ’ ಎಂದಿದ್ದ. ಆ ಬಗ್ಗೆ ಪತಿ ವಿಚಾರಿಸಿದಾಗ, ಸತೀಶ್ ಲೈಂಗಿಕ ಕಿರುಕುಳ ನೀಡುತ್ತಿರುವ ಹಾಗೂ ಆತನ ಬೇಡಿಕೆ ಈಡೇರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಸುತ್ತಿರುವ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೆ’ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

‘ಪ್ರಜಾವಾಣಿ’ ಜತೆ ಮಾತನಾಡಿದ ಸಂತ್ರಸ್ತೆಯ ಪತಿ, ‘ಸತೀಶ್ ಹಲವು ದಿನಗಳಿಂದ ಇದೇ ರೀತಿ ವರ್ತಿಸುತ್ತಿದ್ದಾನೆ. ವಾರದ ಹಿಂದೆ ಸ್ಥಳೀಯ ಕಾರ್ಪೊರೇಟರ್ ಮೂಲಕ ಆತನಿಗೆ ಬುದ್ಧಿ ಹೇಳಿಸಿದ್ದೆವು. ಆದರೂ ಬದಲಾಗದ ಕಾರಣಕ್ಕೆ ಪೊಲೀಸರ ಮೊರೆ ಹೋಗಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT