ಸೋಮವಾರ, ಜೂಲೈ 13, 2020
28 °C

ಗುಂಡೇಟು ತಿಂದವರ ವಿಚಾರಣೆಗೆ ಕಾತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದೀಪಕ್‌ ಕೊಲೆ ಪ್ರಕರಣದಲ್ಲಿ ತನಿಖಾ ತಂಡದ ವಶದಲ್ಲಿರುವ ಇಬ್ಬರ ವಿಚಾರಣೆಯಿಂದ ಮಹತ್ವದ ಮಾಹಿತಿ ಕಲೆಹಾಕಿರುವ ಪೊಲೀಸರು, ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಹಂತಕರಾದ ಪಿಂಕಿ ನವಾಝ್‌ ಮತ್ತು ರಿಜ್ವಾನ್‌ ವಿಚಾರಣೆಗೆ ಕಾತರದಿಂದ ಕಾಯುತ್ತಿದ್ದಾರೆ.

ದಡ್ಡಿಗುರಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರ ಕಾಲಿಗೂ ಗುಂಡೇಟುಗಳು ಬಿದ್ದಿದ್ದವು. ಬಂಧನದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿ ಗುಂಡುಗಳನ್ನು ಹೊರತೆಗೆಯಲಾಗಿದೆ.

ಶನಿವಾರ ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಕಮಿಷನರ್ ಟಿ.ಆರ್‌.ಸುರೇಶ್, ‘ಪಿಂಕಿ ನವಾಝ್‌ ಮತ್ತು ರಿಜ್ವಾನ್‌ರನ್ನು ಶನಿವಾರ ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.