ಹಾಲಿನ ಬೆಲೆ ಏರಿಸದಿದ್ದರೆ ಪ್ರತಿಭಟನೆ

7

ಹಾಲಿನ ಬೆಲೆ ಏರಿಸದಿದ್ದರೆ ಪ್ರತಿಭಟನೆ

Published:
Updated:

ಕೆ.ಆರ್.ಪೇಟೆ: ರಾಜ್ಯ ಹಾಲು ಮಹಾಮಂಡಳ ಹಾಲಿನ ಬೆಲೆಯನ್ನು ಲೀಟರ್‌ಗೆ ₹ 5ರಷ್ಟು ಕಡಿತ ಮಾಡುವ ಮೂಲಕ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಟೀಕಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಾಲು ಮಹಾಮಂಡಳ ಮತ್ತು ಹಾಲು ಉತ್ಪಾದಕರ ಒಕ್ಕೂಟಗಳು ಖರೀದಿ ದರವನ್ನು ಏರಿಸಿ ರೈತರು ಹಾಗೂ ಹಾಲು ಉತ್ಪಾದಕರ ಹಿತ ಕಾಪಾಡಲು ಮುಂದಾಗಬೇಕು. ಇಲ್ಲವೇ ಸರ್ಕಾರವೇ ರೈತರ ಪರವಾಗಿ ಇವರಿಗೆ ಬುದ್ಧೀ ಹೇಳಬೇಕು’ ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಆರ್.ಜಯರಾಂ, ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಜಯರಾಂ, ರೈತ ಸಂಘದ ಜಿಲ್ಲಾ ಘಟಕ ಮಾಜಿ ಅಧ್ಯಕ್ಷ ಮುದುಗೆರೆ ರಾಜೇಗೌಡ, ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಮರುವನಹಳ್ಳಿ ಶಂಕರ್, ರೈತ ಮುಖಂಡರಾದ ನಾರಾಯಣಸ್ವಾಮಿ, ಮುದ್ದುಕುಮಾರ್, ನಗರೂರು ಕುಮಾರ್, ಕರೋಠಿ ತಮ್ಮಯ್ಯ, ಬೂಕನಕೆರೆ ನಾಗರಾಜು, ಚೌಡೇನಹಳ್ಳಿ ಪುಟ್ಟೇಗೌಡ, ನೀತಿಮಂಗಲ ಮಹೇಶ್, ಲಕ್ಷ್ಮೀಪುರ ಜಗದೀಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry