ಸರ್ಕಾರ ವಜಾಕ್ಕೆ ಒತ್ತಾಯ

7

ಸರ್ಕಾರ ವಜಾಕ್ಕೆ ಒತ್ತಾಯ

Published:
Updated:

ಶಿರಾ: ಹಿಂದೂಗಳ ಹತ್ಯೆಯನ್ನು ತಡೆಯಲು ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಒತ್ತಾಯಿಸಿ ಈಚೆಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದಾರಾಮಯ್ಯ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪಿಎಫ್ಐ ಸಂಘಟನೆಗಳಿಗೆ ಬೆಂಬಲ ನೀಡುವ ಮೂಲಕ ಹಿಂದೂಗಳ ಹತ್ಯೆಗೆ ಕಾರಣವಾಗುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಹ ಸಂಚಾಲಕ ಮಂಜುನಾಥ್, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ಮಾಲಿ ಮರಿಯಪ್ಪ, ನಗರ ಅಧ್ಯಕ್ಷ ಬಿ.ಗೋವಿಂದಪ್ಪ, ಬಿಜೆಪಿ ಯುವ ಮಾರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲಿ ಸಿ.ಎಲ್.ಗೌಡ, ಬಸವರಾಜು, ವಿಜಯರಾಜ್, ಲಕ್ಷ್ಮಿನಾರಾಯಣ, ಆನಂದ್, ಸಂತೋಷ್, ಅಜ್ಜಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry