ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಸಾಧನಾ ಸಮಾವೇಶ ನಾಳೆ

Last Updated 7 ಜನವರಿ 2018, 6:22 IST
ಅಕ್ಷರ ಗಾತ್ರ

ಉಡುಪಿ: ಬೈಂದೂರಿನ ಗಾಂಧಿ ಮೈದಾನದಲ್ಲಿ ಸೋಮವಾರ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 20 ಸಾವಿರ ಭಾವಹಿಸುವ ನಿರೀಕ್ಷೆ ಇದೆ. ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದ್ದು, ವಿಶಾಲ ವೇದಿಕೆ, ಬೃಹತ್ ಪೆಂಡಾಲ್ ನಿರ್ಮಾಣವಾಗಿದೆ. ಬೃಹತ್ ಬೈಕ್ ಜಾಥಾ ಸಮಾವೇಶ ಕೂಡ ನಡೆಯಲಿದೆ. ಕುಡಿಯುವ ನೀರಿನ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಬೈಂದೂರಿನಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ 11, ಶಿಕ್ಷಣ ಇಲಾಖೆಯ 7, ಯೋಜನಾ ವಿಭಾಗದ 6, ಆರೋಗ್ಯ ಇಲಾಖೆಯ 3, ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆಯ ತಲಾ 2, ಜಲಸಂಪನ್ಮೂಲ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಸಮಾಜಕಲ್ಯಾಣ ಇಲಾಖೆ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ತಲಾ 1 ಒಟ್ಟು ₹490.92 ಕೋಟಿ ವೆಚ್ಚದ 36 ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನಡೆಯಲಿದೆ.

ವಿವಿಧ ಸೇತುವೆ ನಿರ್ಮಾಣ ಮತ್ತು ಗ್ರಾಮ ರಸ್ತೆಗಳ ಅಭಿವೃದ್ಧಿಗೆ, ಕೊಲ್ಲೂರು ಪ್ರವಾಸಿ ಮಂದಿರ ಅಭಿವೃದ್ಧಿ, ಬಿಜೂರು, ಉಳ್ಳೂರು ಗ್ರಾಮಗಳಲ್ಲಿ ಕಿಂಡಿ ಅಣೆಕಟ್ಟು ಮುಂತಾದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ನಿರ್ಮಾಣಗೊಂಡ ವಿವಿಧ ಸೇತುವೆ, ರಸ್ತೆ, ಗಂಗೊಳ್ಳಿ ಕಡಲ್ಕೊರೆತ ತಡೆಗೋಡೆ, ಪರಿಶಿಷ್ಟ ಜಾತಿ– ಪಂಗಡ ಕಾಲೋನಿ ರಸ್ತೆಗಳನ್ನು ಉದ್ಘಾಟಿಸಲಿದ್ದಾರೆ.

ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಸಂಜೆ 4 ಗಂಟೆಗೆ ₹445 ಕೋಟಿ ವೆಚ್ಚದ ನಾನಾ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಮಾಡುವರು. ₹5 ಕೋಟಿ ವೆಚ್ಚದ ಕಾಪು ಪುರಸಭೆಯ ಕಟ್ಟಡ ಉದ್ಘಾಟನೆ, ₹400 ಕೋಟಿ ವೆಚ್ಚದಲ್ಲಿ ಬೆಳಪುವಿನಲ್ಲಿ ನಿರ್ಮಾಣವಾಗುವ ವಿಜ್ಞಾನ ಸಂಶೋಧನಾ ಕೇಂದ್ರದ ಕಾಮಗಾರಿಗೆ ಚಾಲನೆ ನೀಡುವರು. ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಹ ಮಾಡುವರು.

ಮುಖ್ಯಮಂತ್ರಿ ಸ್ವಾಗತಕ್ಕೆ ಬ್ರಹ್ಮಾವರ ಸಜ್ಜು

ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರದ ₹ 581ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಇದೇ 8ರಂದು ಬರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಬ್ರಹ್ಮಾವರ ಸಜ್ಜುಗೊಂಡಿದೆ.

ಅಂದು ಮಧ್ಯಾಹ್ನ 2 ಗಂಟೆಗೆ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಬ್ರಹ್ಮಾವರ ಪೇಟೆ ಶೃಂಗಾರಗೊಂಡಿದೆ. ಫ್ಲೆಕ್ಸ್, ಬಂಟಿಂಗ್ಸ್, ಪತಾಕೆಗಳಿಂದ ಕಂಗೊಳಿಸುತ್ತಿದೆ.

ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ನಡೆಯಲಿದ್ದು, 10ರಿಂದ 15ಸಾವಿರ ಜನ ಬರುವ ನಿರೀಕ್ಷೆ ಇದೆ. ನಗರದ ಗಾಂಧಿ ಮೈದಾನದಲ್ಲೇ ಮಧ್ಯಾಹ್ನ ಸುಮಾರು 10 ಸಾವಿರ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

ವಾರಾಹಿಯಿಂದ ಉಡುಪಿಗೆ ನೀರು ತಂದು ಬಜೆ ಅಣೆಕಟ್ಟಿನಲ್ಲಿ ಶುದ್ಧೀಕರಣ ಘಟಕದಲ್ಲಿ ಶುದ್ಧೀಕರಿಸಿ, ಶಾಶ್ವತ ಕುಡಿಯುವ ನೀರನ್ನು ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಆಸುಪಾಸಿನ ಗ್ರಾಮಗಳಿಗೆ ಪೂರೈಸುವ ಅಂದಾಜು ₹ 270 ಕೋಟಿಯ ಐತಿಹಾಸಿಕ ಯೋಜನೆಗೆ ಚಾಲನೆ ನೀಡಲಾಗುವುದು. ₹ 100 ಕೋಟಿಯ ಒಳಚರಂಡಿ ಯೋಜನೆ, ₹ 31 ಕೋಟಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸೇರಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ವಿವಿಧ ಇಲಾಖೆಯ ₹ 509 ಕೋಟಿಯ ಕಾಮಗಾರಿಗಳ ಶಿಲಾನ್ಯಾಸ ಹಾಗೂ ₹ 79 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ.ಮಲ್ಪೆಯ ಮೂರನೇ ಹಂತದ ಬಂದರು ಕಾಮಗಾರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾರಾಡಿ ನಿತ್ಯಾನಂದ ಶೆಟ್ಟಿ ತಿಳಿಸಿದ್ದಾರೆ.

ಕಾಪುವಿನಲ್ಲಿ ₹445 ಕೋಟಿ

ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಸಂಜೆ 4 ಗಂಟೆಗೆ ₹445 ಕೋಟಿ ವೆಚ್ಚದ ನಾನಾ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಮಾಡುವರು. ₹5 ಕೋಟಿ ವೆಚ್ಚದ ಕಾಪು ಪುರಸಭೆಯ ಕಟ್ಟಡ ಉದ್ಘಾಟನೆ, ₹400 ಕೋಟಿ ವೆಚ್ಚದಲ್ಲಿ ಬೆಳಪುವಿನಲ್ಲಿ ನಿರ್ಮಾಣವಾಗುವ ವಿಜ್ಞಾನ ಸಂಶೋಧನಾ ಕೇಂದ್ರದ ಕಾಮ ಗಾರಿಗೆ ಚಾಲನೆ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT