ಮಂಗಳವಾರ, ಆಗಸ್ಟ್ 11, 2020
26 °C

ಕೃಷಿ ತಜ್ಞ ಡಾ.ಎಂ.ಎಸ್. ಸ್ವಾಮಿನಾಥನ್‌ಗೆ ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಇಲ್ಲಿನ ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಪ್ರತಿ ವರ್ಷ ನೀಡಲಾಗುವ ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಬಾರಿ ಕೃಷಿ ತಜ್ಞ ಡಾ.ಎಂ.ಎಸ್. ಸ್ವಾಮಿನಾಥನ್ ಅವರಿಗೆ ಪ್ರದಾನ ಮಾಡಲಾಗುತ್ತಿದೆ.

ಪಂಚಮಸಾಲಿ ಪೀಠದ ಜಗದ್ಗರು ಶ್ರೀ ಬಸವಜಯ ಮೃತ್ಯುಂಜಯ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಪುರಸ್ಕಾರ ಹಾಗೂ ತಾಮ್ರಪತ್ರ ಸ್ಮರಣಿಕೆಯನ್ನೊಳಗೊಂಡಿದೆ.

ಇದೇ 24ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕೂಡಲಸಂಗಮದ ಬದಲಾಗಿ ತಮಿಳುನಾಡಿನ ಚೆನ್ನೈನಲ್ಲಿ ಸಮಾರಂಭ ಆಯೋಜಿಸಲಾಗುತ್ತಿದೆ. 

ಬಸವಣ್ಣನವರ ಕಾಯಕ ತತ್ವಗಳನ್ನು ತಮಿಳುನಾಡಿನಲ್ಲಿಯೂ ತಲುಪಿಸಬೇಕೆಂಬ ಉದ್ದೇಶದಿಂದ ಡಾ.ಎಂ.ಎಸ್.ಸ್ವಾಮಿನಾಥನ್ ಅವರ ಅಪೇಕ್ಷೆ ಮೇರೆಗೆ ಚೆನ್ನೈನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಮಾರಂಭದ ಬಗ್ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.