ಬುಧವಾರ, ಆಗಸ್ಟ್ 5, 2020
26 °C

ಉತ್ತರಾಖಂಡ: ತೀವ್ರ ಚಳಿಯಿಂದ ರಕ್ಷಿಸಲು ಭಿಕ್ಷುಕರ ಬಂಧನ!

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಉತ್ತರಾಖಂಡ: ತೀವ್ರ ಚಳಿಯಿಂದ ರಕ್ಷಿಸಲು ಭಿಕ್ಷುಕರ ಬಂಧನ!

ಹರಿದ್ವಾರ: ತೀವ್ರ ಚಳಿಯಿಂದ ತತ್ತರಿಸಿರುವ ಈಶಾನ್ಯ ರಾಜ್ಯಗಳಲ್ಲಿ ನಿರಾಶ್ರಿತರ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಹರಿದ್ವಾರ ಪೊಲೀಸರು, ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುವವರನ್ನು ಬಂಧಿಸಿ ಜೈಲಿಗೆ ಹಾಕಲು ನಿರ್ಧರಿಸಿದ್ದಾರೆ.

ಚಳಿಯಿಂದ ರಕ್ಷಿಸುವ ಸಲುವಾಗಿ ಭಿಕ್ಷುಕರನ್ನು ಬಂಧಿಸುವಂತೆ ಹಿರಿಯ ಪೊಲೀಸ್‌ ಅಧೀಕ್ಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಆದೇಶಿಸಿದ್ದಾರೆ.

ಇದೇ ಮೊದಲ ಬಾರಿಗೆ ಭಿಕ್ಷಾಟನೆ ಮಾಡುತ್ತಿದ್ದ ಮಹಿಳೆಯನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.

ಕೆಲದಿನಗಳ ಹಿಂದೆ ತೀವ್ರ ಚಳಿಯಿಂದಾಗಿ ಮೂವರು ಅಪರಿಚಿತರು ಮೃತಪಟ್ಟಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹರಿದ್ವಾರ ಜಿಲ್ಲಾಡಳಿತ ನಿರಾಶ್ರಿತರನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದೆ.

ಅಧಿಕಾರಿಗಳು ನಿರಾಶ್ರಿತರ ಪ್ರಾಣ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಮುಂಬರುವ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.