ಮಂಗಳವಾರ, ಜೂಲೈ 7, 2020
23 °C

ಆಶ್ರಮಗಳಿಗೆ ₹4 ಲಕ್ಷ ಮೌಲ್ಯದ ಆಹಾರ ಪದಾರ್ಥ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅಂತರರಾಷ್ಟ್ರೀಯ ಲಯನ್ಸ್ ಕ್ಲಬ್‌ 317–ಎಫ್‌’ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾಂತೀಯ 5ರ ಸಮ್ಮೇಳನದಲ್ಲಿ ₹ 4 ಲಕ್ಷ ಮೌಲ್ಯದ ಆಹಾರ ಪದಾರ್ಥಗಳನ್ನು ವಿವಿಧ ಆಶ್ರಮಗಳಿಗೆ ನೀಡಲಾಯಿತು.

ಕ್ಲಬ್‌ನ ಸಹಯೋಗದಲ್ಲಿ ಸಹಕಾರನಗರದ ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸಿದ ಐದು ಶೌಚಾಲಯಗಳನ್ನು ಪ್ರಾಂತೀಯ–5ರ ಅಧ್ಯಕ್ಷ ಕೆ.ಎಸ್.ಅಜಿತ್‌ಬಾಬು ಭಾನುವಾರ ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಲ್ಯಾಪ್‌ಟಾಪ್ ಹಾಗೂ ಅಂಗವಿಕಲ ಯೋಧರಿಗೆ ಗಾಲಿಕುರ್ಚಿಗಳನ್ನು ವಿತರಿಸಿದರು.

‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ಲಬ್‌ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ಕ್ಲಬ್‌ ನಿರ್ದೇಶಕ ಆರ್.ಮುರುಗನ್ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.