ಮತದಾನದ ಕುರಿತು ಅರಿವು

7

ಮತದಾನದ ಕುರಿತು ಅರಿವು

Published:
Updated:

ಬೆಂಗಳೂರು: ದಾಸರಹಳ್ಳಿ ವ್ಯಾಪ್ತಿಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ ಹಾಗೂ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಶನಿವಾರ ನಡೆಯಿತು.

ಪೀಣ್ಯ ದಾಸರಹಳ್ಳಿ ಸಮೀಪದ ಬಾಗಲಗುಂಟೆ ವಾರ್ಡ್‌ನಲ್ಲಿ ಕಂದಾಯ ಇಲಾಖೆ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ಬಾಗಲಗುಂಟೆ ಪಾಲಿಕೆ ಸದಸ್ಯ ನರಸಿಂಹ ನಾಯಕ್ ಹಾಗೂ ವಿದ್ಯಾರ್ಥಿಗಳು ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಕಂದಾಯ ವಸೂಲಿಗಾರರಾದ ರಮೇಶ್, ‘ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 12ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವಂತೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry