ಹುಬ್ಬಳ್ಳಿ–ಧಾರವಾಡ ಬಂದ್‌ ಇಂದು

7

ಹುಬ್ಬಳ್ಳಿ–ಧಾರವಾಡ ಬಂದ್‌ ಇಂದು

Published:
Updated:

ಹುಬ್ಬಳ್ಳಿ: ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ, ಸಂವಿಧಾನ ಬದಲಾಯಿಸುವುದಾಗಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೇಳಿಕೆ ಹಾಗೂ ಮಹಾರಾಷ್ಟ್ರದ ಕೋರೆಗಾಂವ್‌ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹುಬ್ಬಳ್ಳಿ–ಧಾರವಾಡದ ದಲಿತ ಸಂಘ ಸಂಸ್ಥೆಗಳ ಮಹಾಮಂಡಳವು ಸೋಮವಾರ (ಜ.8) ಅವಳಿ ನಗರ ಬಂದ್‌ಗೆ ಕರೆ ನೀಡಿದೆ.

ಬಂದ್‌ ಹಿನ್ನೆಲೆಯಲ್ಲಿ, ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಸ್‌ ಸಂಚಾರ ಸ್ಥಗಿತಗೊಳಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಸೋಮವಾರ ನಡೆಯಬೇಕಿದ್ದ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಜ.9ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry