ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯ ಬಳಕೆ ಉತ್ತೇಜಿಸಲು ‘ಸ್ಮಾರ್ಟ್ ರನ್’

Last Updated 7 ಜನವರಿ 2018, 19:45 IST
ಅಕ್ಷರ ಗಾತ್ರ

ಬೆಂಗಳೂರು: ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳ ಬಳಕೆಯನ್ನು ಉತ್ತೇಜಿಸಲು ಕೃಷಿ ಇಲಾಖೆಯು ಕಬ್ಬನ್ ಉದ್ಯಾನದಲ್ಲಿ ಭಾನುವಾರ ‘5ಕೆ ಸ್ಮಾರ್ಟ್‌ ರನ್’ ಆಯೋಜಿಸಿತ್ತು.

ಕೃಷಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಮೇಯರ್ ಆರ್.ಸಂಪತ್‌ರಾಜ್‌ ಅವರು ಓಟಕ್ಕೆ ಚಾಲನೆ ನೀಡಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್‌ ಹಾಗೂ ಕೃಷಿ ಆಯುಕ್ತ ಜಿ.ಸತೀಶ್ ಸೇರಿದಂತೆ ಸುಮಾರು 3,500 ಮಂದಿ ಪಾಲ್ಗೊಂಡರು.

ಮೊದಲು ಮಕ್ಕಳು ತಂದೆ–ತಾಯಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದರು. ಆದರೆ, ಈಗ ಮಕ್ಕಳಲ್ಲೂ ಅನಾರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಆಹಾರ ಪದ್ಧತಿಯೇ ಇದಕ್ಕೆ ಕಾರಣ. ಇಂದಿನ ಆಹಾರ ಪದ್ಧತಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಸಿ.ಎನ್.ಮಂಜುನಾಥ್ ಸಲಹೆ ನೀಡಿದರು.

‘ಸಿರಿಧಾನ್ಯಗಳನ್ನು ಅತ್ಯಧಿಕವಾಗಿ ಬೆಳೆಯುವ ದೇಶ ನಮ್ಮದು. ಆರೋಗ್ಯಕರ ಹಾಗೂ ನೆಮ್ಮದಿಯ ನಾಳೆಗಳನ್ನು ನಿರ್ಮಿಸಬೇಕಾದರೆ ಇಂತಹ ಧಾನ್ಯಗಳನ್ನು ಹೆಚ್ಚಾಗಿ ಬಳಸಬೇಕು’ ಎಂದು ಹೇಳಿದರು. ಇದೇ 19ರಿಂದ 21ರವರೆಗೆ ಕೃಷಿ ಇಲಾಖೆಯು ನಗರದಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳ ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಿದೆ. ಸಾವಯವ ಕೃಷಿಕರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಈ ಮೇಳದಲ್ಲಿ ಪ್ರದಾನ ಮಾಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT