ಬೆಂಗಳೂರಿನಲ್ಲಿ ಬೆಂಕಿ ಅವಘಡ: ಐವರು ಸಜೀವ ದಹನ

7

ಬೆಂಗಳೂರಿನಲ್ಲಿ ಬೆಂಕಿ ಅವಘಡ: ಐವರು ಸಜೀವ ದಹನ

Published:
Updated:

ಬೆಂಗಳೂರು: ನಗರದ ಕಲಾಸಿಪಾಳ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಕೈಲಾಸ್ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಐವರು ಸಜೀವವಾಗಿ ದಹನವಾಗಿದ್ದಾರೆ.

ತುಮಕೂರಿನ ಸ್ವಾಮಿ (23), ಪ್ರಸಾದ್ (20), ಹಾಸನದ ಮಂಜುನಾಥ್ (45), ಮಂಡ್ಯದ ಕೀರ್ತಿ (24) ಹಾಗೂ ಮಹೇಶ್ ( 35)  ಮೃತರು. ಇವರೆಲ್ಲ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಕೆಲಸ ಮುಗಿಸಿ ಮಲಗಿದ್ದಾಗ ಈ ಅವಘಡ ಸಂಭವಿಸಿದೆ.

ಸದ್ಯಕ್ಕೆ ಘಟನೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ನಸುಕಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry