ದಾವಣಗೆರೆಯಲ್ಲಿ ಇಬ್ಬರಿಗೆ ಚೂರಿ ಇರಿತ: ಕೆಲಕಾಲ ಉದ್ವಿಗ್ನ ಪರಿಸ್ಥಿತಿ

7

ದಾವಣಗೆರೆಯಲ್ಲಿ ಇಬ್ಬರಿಗೆ ಚೂರಿ ಇರಿತ: ಕೆಲಕಾಲ ಉದ್ವಿಗ್ನ ಪರಿಸ್ಥಿತಿ

Published:
Updated:
ದಾವಣಗೆರೆಯಲ್ಲಿ ಇಬ್ಬರಿಗೆ ಚೂರಿ ಇರಿತ: ಕೆಲಕಾಲ ಉದ್ವಿಗ್ನ ಪರಿಸ್ಥಿತಿ

ದಾವಣಗೆರೆ: ಇಲ್ಲಿನ ಆಜಾದ್ ನಗರ ಮುಖ್ಯ ರಸ್ತೆಯಲ್ಲಿ ಭಾನುವಾರ ರಾತ್ರಿ ಯುವಕನೊಬ್ಬ ಇಬ್ಬರಿಗೆ ಚಾಕುವಿನಿಂದ ಇರಿದಿದ್ದಾನೆ.

ಇಮ್ರಾನ್ (19) ಹಾಗೂ ಜಿಲಾನ್ (21) ಗಂಭೀರ ಗಾಯಗೊಂಡಿದ್ದು ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ದುರ್ಗೇಶ್ ನನ್ನು ಬಂಧಿಸಲಾಗಿದೆ.

ಯುವಕನಿಗೆ ಇರಿದ ಸುದ್ದಿ ಹರಡುತ್ತಿದ್ದಂತೆ ತಡರಾತ್ರಿ ನೂರಾರು ಜನ ಒಂದೆಡೆ ಜಮಾಯಿಸಿದ್ದರು. ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿತು.

ಆಜಾದ್ ನಗರ, ಕೊರಚರಹಟ್ಟಿ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಾಂತಿಗೆ ಭಂಗ ತರುವಂತಹ ಪ್ರಚೋದನಾಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಕುಡಿದ ಅಮಲಿನಲ್ಲಿ ಕೃತ್ಯ: ಆರೋಪಿ ದುರ್ಗೇಶ್ ಯಾವ ಸಂಘಟನೆಗೂ ಸೇರಿಲ್ಲ. ಕುಡಿದ ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ. ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ದುರ್ಗೇಶ್ ವಿರುದ್ಧ ಈ ಹಿಂದೆ ಎರಡು ಹಲ್ಲೆ ಪ್ರಕರಣಗಳು ದಾಖಲಾಗಿವೆ ಎಂದು ಎಸ್ ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry