ಬುಧವಾರ, ಜೂಲೈ 8, 2020
29 °C

ಸಮಾವೇಶಕ್ಕೆ ಬರದ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾವಗಡ: ಪಟ್ಟಣದಲ್ಲಿ ಸೋಮವಾರ ನಡೆಯಲಿರುವ ಮನೆ ಮನೆಗೆ ಕುಮಾರಣ್ಣ ಉದ್ಘಾಟನಾ ಕಾರ್ಯಕ್ರಮ ಹಾಗೂ ಯುವ ಜನತಾದಳ ಬೃಹತ್ ಸಮಾವೇಶಕ್ಕೆ ಗುರುಭವನ ಮೈದಾನದ ಬಳಿ ಭಾನುವಾರ ಸಿದ್ಧತೆ ನಡೆಸಲಾಯಿತು.

ಯುವ ಜನತಾ ದಳ ಕಾರ್ಯಕರ್ತರು ಹಮ್ಮಿಕೊಂಡಿರುವ ಬೈಕ್ ರ‍್ಯಾಲಿಗೆ ಜೆಡಿಎಸ್ ಯುವ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ. ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ಜೆಡಿಎಸ್‌ ರಾಷ್ಟ್ರ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಉದ್ಘಾಟಿಸಲಿದ್ದಾರೆ.

ಚಿತ್ರ ನಟ ನಿಖಿಲ್‌ಗೌಡ, ಪ್ರಜ್ವಲ್ ರೇವಣ್ಣ, ಜಿಲ್ಲೆಯ ಜೆಡಿಎಸ್ ಶಾಸಕರಾದ ಸುಧಾಕರ್ ಲಾಲ್, ಶ್ರೀನಿವಾಸ್, ಎಂ.ಟಿ.ಕೃಷ್ಣಪ್ಪ, ಸುರೇಶ್ ಬಾಬು, ನಾಗರಾಜಯ್ಯ, ವಿಧಾನ ಪರಿಷತ್ ಸದಸ್ಯ ಕಾಂತರಾಜು, ರಮೇಶಬಾಬು, ಚೌಡರೆಡ್ಡಿ ತೂಪಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಘಟಕದ ಉಪಾಧ್ಯಕ್ಷ ತಿಮ್ಮಾರೆಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಸಿ.ಅಂಜಿನಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮರೆಡ್ಡಿ, ಯುವ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಚೌಧರಿ, ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕ ರಮೇಶ್, ಸಂಘಟನಾ ಕಾರ್ಯದರ್ಶಿ ಎನ್.ಎ.ಈರಣ್ಣ, ಉಪಾಧ್ಯಕ್ಷ ಚಂದ್ರಶೇಖರ್, ಪುರಸಭೆ ಅಧ್ಯಕ್ಷೆ ಸುಮಾ ಅನಿಲ್, ಪುರಸಭೆ ಸದಸ್ಯರು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿರುವರು ಎಂದು ಶಾಸಕ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.