ಬುಧವಾರ, ಜೂಲೈ 8, 2020
29 °C

ಮನುಷ್ಯರೇ ಅಲ್ಲದ ಬಿಜೆಪಿಯವರಿಂದ ಹಿಂದುತ್ವದ ಪಾಠ ಕಲಿಯಬೇಕಿಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮನುಷ್ಯರೇ ಅಲ್ಲದ ಬಿಜೆಪಿಯವರಿಂದ ಹಿಂದುತ್ವದ ಪಾಠ ಕಲಿಯಬೇಕಿಲ್ಲ: ಸಿದ್ದರಾಮಯ್ಯ

ಉಡುಪಿ: ಮನುಷ್ಯರೇ ಅಲ್ಲದ ಬಿಜೆಪಿ ಮುಖಂಡರಿಂದ ಹಿಂದುತ್ವದ ಪಾಠ ಕಲಿಯಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದರು.

ಸೋಮವಾರ ಸಾಧನ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಡುಪಿಯ ಬೈಂದೂರಿಗೆ ಬಂದ ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

‘ನಾವು ಹಿಂದೂಗಳು ಅದರಲ್ಲೂ ಮನುಷ್ಯತ್ವ ಇರುವ ಹಿಂದೂಗಳು. ಗೋಡ್ಸೆ ಆರಾಧಕರು ನಮಗೆ ಹಿಂದುತ್ವದ ಪಾಠ ಮಾಡುವುದು ಬೇಡ’ ಎಂದು ವಾಗ್ದಾಳಿ ನಡೆಸಿದರು.

‘ಕೋಮು ಗಲಭೆಗಳಿಗೆ ಸಂಘ ಪರಿವಾರದ ಸಂಘಟನೆಗಳೇ ಕಾರಣ ಎಂದು ಆರೋಪಿಸಿದ ಅವರು, ಪಿಎಫ್ಐ, ಬಜರಂಗದಳ ಸಂಘಟನೆ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದೇನೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.