‘ ಜೆಡಿಎಸ್‌ಗೆ ಚುನಾವಣೆಯಲ್ಲಿ ಗೆಲುವು’

7

‘ ಜೆಡಿಎಸ್‌ಗೆ ಚುನಾವಣೆಯಲ್ಲಿ ಗೆಲುವು’

Published:
Updated:

ಬಳ್ಳಾರಿ: ‘ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಶತಸಿದ್ಧ ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಿಜಯಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಪಕ್ಷದ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೂತನ ವರ್ಷದ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

‘ಮುಖಂಡರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಮುಂದಾಗಬೇಕು. ಕುಮಾರಸ್ವಾಮಿ ಅವರ ಅವಧಿಯಲ್ಲಿ ಜಾರಿಗೊಳಿಸಿದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ಮೀನಳ್ಳಿ ತಾಯಣ್ಣ, ಕುಡುತಿನಿ ಶ್ರೀನಿವಾಸ್, ರಸೂಲ್ ಸಾಬ್, ಮುಕ್ಕಣ್ಣ, ಪಂಪಾಪತಿ, ಶಾಂತಕುಮಾರ್, ಗೌಸಿಯಾ ಬೇಗಂ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry