ಬುಧವಾರ, ಆಗಸ್ಟ್ 5, 2020
21 °C

ಗುರುಗ್ರಾಮ ವಿದ್ಯಾರ್ಥಿ ಕೊಲೆ ಪ್ರಕರಣ: ಬಾಲಾರೋಪಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಗುರುಗ್ರಾಮ ವಿದ್ಯಾರ್ಥಿ ಕೊಲೆ ಪ್ರಕರಣ: ಬಾಲಾರೋಪಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತ

ಗುರುಗ್ರಾಮ: ನಗರದ ರಿಯಾನ್‌ ಇಂಟರ್‌ನ್ಯಾಷನಲ್‌ ಶಾಲೆಯ ಏಳು ವರ್ಷದ ಬಾಲಕ ಪ್ರದ್ಯುಮ್ನ ಠಾಕೂರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ 16 ವರ್ಷದ ವಿದ್ಯಾರ್ಥಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಗುರುಗ್ರಾಮ ನ್ಯಾಯಾಲಯ ತಿರಸ್ಕರಿಸಿದೆ.

ಜಾಮೀನು ಅರ್ಜಿ ಸಂಬಂಧ ಶನಿವಾರ ‘ಸಿಬಿಐ ಮತ್ತು ದೂರುದಾರರ ವಾದ ಕೇಳಿದ ಬಳಿಕ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಜಸ್ಬಿರ್‌ ಸಿಂಗ್‌ ಕುಂದು ಆದೇಶವನ್ನು ಕಾಯ್ದಿರಿಸಿದ್ದರು. ಸೋಮವಾರ ಜಾಮೀನು ಅರ್ಜಿ ತಿರಸ್ಕರಿಸಿದರು.

2016ರ ಸೆ .8ರಂದು ಎಂದಿನಂತೆ ಶಾಲೆಗೆ ತೆರಳಿದ್ದ ಪ್ರದ್ಯುಮ್ನ ಠಾಕೂರ್‌ ಮೃತದೇಹ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ...

ಹಿರಿಯ ವಿದ್ಯಾರ್ಥಿಯಿಂದಲೇ ಕೊಲೆ?

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.