ಬೆಂಗಳೂರು: ವಿಧಾನಸಭಾ ಚುನಾವಣೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ರಾಜ್ಯ ಸರ್ಕಾರದ ಅಧಿಕಾರಿಗಳ ಜತೆ ಸಭೆ ಸೇರಿ ಮಾತುಕತೆ ನಡೆಸಲಿದ್ದಾರೆ.

ಉಪ ಚುನಾವಣಾ ಆಯುಕ್ತರಾದ ಉಮೇಶ ಸಿನ್ಹಾ ಮತ್ತು ಸಂದೀಪ್ ಸಕ್ಸೇನಾ ಅವರ ಜತೆ ಏಳು ತಂತ್ರಜ್ಞರು ದೆಹಲಿಯಿಂದ ಬರಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಜಿಲ್ಲೆಗಳಲ್ಲಿ ಚುನಾವಣಾ ತಯಾರಿಗೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಇಷ್ಟೇ ಅಲ್ಲದೇ, ಬುಧವಾರ ವಿವಿಧ ರಾಜಕೀಯ ಪಕ್ಷಗಳ ಜೊತೆ ಮಾತುಕತೆ ನಡೆಸಲಿದ್ದು, ಗುರುವಾರ ಕಾರ್ಯದರ್ಶಿ ಮತ್ತು ಮೇಲ್ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸುವರು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ತಿಳಿಸಿದರು.

ಮತದಾರರ ಪಟ್ಟಿ ತಯಾರಿ, ಮತಗಟ್ಟೆಗಳ ಸಂಖ್ಯೆ, ಕಾನೂನು ಸುವ್ಯವಸ್ಥೆ ಬಗ್ಗೆ ಇದೇ ಸಂದರ್ಭದಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.