ಶನಿವಾರ, ಜೂಲೈ 4, 2020
21 °C

ಆಸ್ಟ್ರೇಲಿಯಾ ಓಪನ್‌ ಟೂರ್ನಿಗೆ ಅಜರೆಂಕಾ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

ಆಸ್ಟ್ರೇಲಿಯಾ ಓಪನ್‌ ಟೂರ್ನಿಗೆ ಅಜರೆಂಕಾ ಇಲ್ಲ

ಮೆಲ್ಬರ್ನ್‌ : ಬೆಲಾರಸ್‌ನ ಆಟಗಾರ್ತಿ ವಿಕ್ಟೋರಿಯಾ ಅಜರೆಂಕಾ ಜನವರಿ 15ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಿಂದ ಹಿಂದೆಸರಿದಿದ್ದಾರೆ.

ಈ ಋತುವಿನ ಮೊದಲ ಗ್ರ್ಯಾಂಡ್‌ಸ್ಲಾಮ್‌ನಲ್ಲಿ ಅಜರೆಂಕಾ ಅವರಿಗೆ ವೈಲ್ಡ್ ಕಾರ್ಡ್ ಪ್ರವೇಶ ಸಿಕ್ಕಿತ್ತು. ಆದರೆ ಮಗನನ್ನು ತಮ್ಮ ಬಳಿಯೇ ಉಳಿಸಿಕೊಳ್ಳುವ ಉದ್ದೇಶದಿಂದ ಕಾನೂನು ಸಮರ ನಡೆಸುತ್ತಿರುವ ಅವರು ಆಸ್ಟ್ರೇಲಿಯಾ ಓಪನ್‌ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

‘ಅಜರೆಂಕಾ ಅವರು ಆಸ್ಟ್ರೇಲಿಯಾಕ್ಕೆ ಪ್ರಯಾಣ ಮಾಡುತ್ತಿಲ್ಲ. ಇದು ಬೇಸರದ ಸಂಗತಿ’ ಎಂದು ಟೂರ್ನಿಯ ನಿರ್ದೇಶಕರಾದ ಕ್ರಿಯಾಗ್‌ ಹೇಳಿದ್ದಾರೆ. ಆಕ್ಲಂಡ್ ಕ್ಲಾಸಿಕ್ ಟೂರ್ನಿಯಲ್ಲಿ ಕೂಡ ಅಜರೆಂಕಾ ಆಡಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.