ಕಾಂಗ್ರೆಸ್‌ನಿಂದ ಸ್ಪರ್ಧೆ ಖಚಿತ ನಟ ಶಶಿಕುಮಾರ್‌

7

ಕಾಂಗ್ರೆಸ್‌ನಿಂದ ಸ್ಪರ್ಧೆ ಖಚಿತ ನಟ ಶಶಿಕುಮಾರ್‌

Published:
Updated:
ಕಾಂಗ್ರೆಸ್‌ನಿಂದ ಸ್ಪರ್ಧೆ ಖಚಿತ ನಟ ಶಶಿಕುಮಾರ್‌

ಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದು ಖಚಿತ’ ಎಂದು ಚಿತ್ರನಟ ಶಶಿಕುಮಾರ್‌ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೊಳಕಾಲ್ಮುರು ಹಾಗೂ ಚಳ್ಳಕೆರೆ ಕ್ಷೇತ್ರಗಳೆರಡೂ ನಾಯಕ ಮೀಸಲು ಕ್ಷೇತ್ರವಾಗಿವೆ. ಈ ಕಾರಣಕ್ಕಾಗಿ ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಕಾಂಕ್ಷಿ ಆಗಿದ್ದೇನೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡಿದ್ದು, ಸಾಧನಾ ಸಮಾವೇಶದ ನಂತರ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ’ ಎಂದು ಹೇಳಿದರು.

‘ಹಿಂದೆಯೇ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ವಿಧಾನಪರಿಷತ್ ಸದಸ್ಯನನ್ನಾಗಿಸುವ ಪ್ರಯತ್ನವೂ ನಡೆದಿತ್ತು. ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ಟಿಕೆಟ್‌ ನೀಡುವ ಇಂಗಿತವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry