ಸೋಮವಾರ, ಜೂಲೈ 6, 2020
28 °C

ಅರ್ಧ ಹೆಲ್ಮೆಟ್‌ ಮಾರಾಟ ತಡೆಗೆ ಜಂಟಿ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಸ್‌ಐ, ಬಿಎಸ್ಐ ಮುದ್ರೆ ಇಲ್ಲದ ಹಾಗೂ ಅರ್ಧ ಹೆಲ್ಮೆಟ್‌ ಮಾರಾಟ ನಿರ್ಬಂಧಿಸಲು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಸೂಚನೆ ನೀಡಿದೆ.

‘ಆಪರೇಷನ್ ಸೇಫ್ ರೈಡ್’ ಹೆಸರಿನ ಕಾರ್ಯಾಚರಣೆ ನಡೆಸಿ ದಂಡ ವಿಧಿಸುವುದರ ಜತೆಗೆ, ಅರ್ಧ ಹೆಲ್ಮೆಟ್‌ ಮಾರಾಟ ಮಾಡುವ ರಸ್ತೆ ಬದಿ ವ್ಯಾಪಾರಿಗಳು ಹಾಗೂ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಇಂತಹ ಹೆಲ್ಮೆಟ್‌ ಮಾರುವವರಿದ್ದರೆ ಮಾತ್ರ ಖರೀದಿ ಮಾಡಿ, ಧರಿಸುವವರು ಇರುತ್ತಾರೆ. ಹೀಗಾಗಿ ಮೂಲದಲ್ಲೇ ಇದನ್ನು ನಿರ್ಬಂಧಿಸುವುದು ಸೂಕ್ತ. ಹೀಗೆ ಮಾಡಿದಲ್ಲಿ ಜನರ ಆಕ್ರೋಶವನ್ನು ತಪ್ಪಿಸಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದನ್ನು ಆಧರಿಸಿ, ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ ಎಂದೂ ಮೂಲಗಳು ಹೇಳಿವೆ.

ಕಳಪೆ ಹಾಗೂ ಅರ್ಧ ಹೆಲ್ಮೆಟ್‌ ತಯಾರಕ ಕಂಪನಿಗಳಿಗೂ ಉತ್ಪಾದನೆ ಮತ್ತು ಪೂರೈಕೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ, ಐಎಸ್‌ಐ ಮುದ್ರೆ ಇರದ ಹಾಗೂ ಅರ್ಧ ಹೆಲ್ಮೆಟ್‌ ಧರಿಸುವವರಿಗೆ ಮೈಸೂರಿನಲ್ಲಿ ದಂಡ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಇಂತಹದೇ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.