ಬೆಂಗಳೂರು: ಶಿವಾನಂದ ವೃತ್ತದ ಬಳಿಯ ಉಕ್ಕಿನ ಮೇಲ್ಸೇತುವೆ ನಿರ್ಮಾಣಕ್ಕೆ ತಡೆ ನೀಡಲು ಸ್ಪಷ್ಟವಾಗಿ ನಿರಾಕರಿಸಿರುವ ಹೈಕೋರ್ಟ್ ಈ ಕುರಿತಂತೆ ಸಲ್ಲಿಸಲಾಗಿದ್ದ ಮಧ್ಯಂತರ ಅರ್ಜಿಗಳನ್ನು ವಜಾ ಮಾಡಿದೆ.

ಕುಮಾರ ಪಾರ್ಕ್ ಪೂರ್ವ ಭಾಗದ ನಿವಾಸಿ ಬಿ.ಪಿ.ಮಹೇಶ್ ಮತ್ತು 19 ಜನ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಈ ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.

‘ಭಾರತೀಯ ರಸ್ತೆ ಕಾಂಗ್ರೆಸ್ (ಐಆರ್‌ಸಿ) ನಿಯಮಾವಳಿಗೆ ಅನುಗುಣವಾಗಿಯೇ ಸೇತುವೆ ವಿನ್ಯಾಸ ಇದೆ. ನಿರ್ಮಾಣವನ್ನು ತಡ ಮಾಡಿದರೆ ಅದರ ಯೋಜನಾ ವೆಚ್ಚ ಹೆಚ್ಚುತ್ತದೆ. ಅಂತೆಯೇ ಈ ಮಾರ್ಗದ ಪ್ರಯಾಣಿಕರ ಬವಣೆ ನೀಗುವುದೂ ಇನ್ನಷ್ಟು ತಡವಾಗುತ್ತದೆ. ಆದ್ದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪರ ಹಿರಿಯ ವಕೀಲ ಡಿ.ಎನ್.ನಂಜುಂಡರೆಡ್ಡಿ ಮಂಡಿಸಿರುವ ವಾದ ಸಮರ್ಪಕವಾಗಿದೆ’ ಎಂದು ಆದೇಶದಲ್ಲಿ ಅಭಿಪ್ರಾಯಪಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.