ಗುರುವಾರ , ಜೂಲೈ 2, 2020
27 °C

‘ಏಐ’ ಬಿಸಿನೆಸ್‌ ಕ್ಲಾಸ್‌ಗೆ ಲ್ಯಾಪ್‌ಟಾಪ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಹೆಚ್ಚಿನ ಪ್ರಯಾಣಿಕರನ್ನು ಆಕರ್ಷಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ವಿಮಾನಗಳ ಬಿಸಿನೆಸ್‌ ಕ್ಲಾಸ್‌ ಪ್ರಯಾಣಿಕರ  ಬಳಕೆಗೆ ಲ್ಯಾಪ್‌ಟಾಪ್‌ ನೀಡಲು ನಿರ್ಧರಿಸಲಾಗಿದೆ’ ಎಂದು ಏರ್‌ಇಂಡಿಯಾ ವಿಮಾನಯಾನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ ಸಿಂಗ್‌ ಖರೋಲಾ ತಿಳಿಸಿದ್ದಾರೆ.

‘ಸದ್ಯಕ್ಕೆ ಬಿಸಿನೆಸ್‌ ಕ್ಲಾಸ್‌ನ ಅರ್ಧದಷ್ಟು ಆಸನಗಳು ಖಾಲಿ ಉಳಿಯುತ್ತಿವೆ. ಹೀಗಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸಲು ಇರುವ ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಗುಣಮಟ್ಟದ ಸೇವೆ, ಮನರಂಜನೆ ನೀಡುವ ಬಗ್ಗೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದ್ದಾರೆ.

ಗುತ್ತಿಗೆ ಸಿಬ್ಬಂದಿ ವಜಾ: ನಷ್ಟದಲ್ಲಿಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 400ಕ್ಕೂ ಅಧಿಕ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದೆ.

ನಿವೃತ್ತಿ ಪಡೆದಿದ್ದ ಸಿಬ್ಬಂದಿಯನ್ನು ತಂತ್ರಜ್ಞಾನೇತರ ಕೆಲಸಗಳಿಗಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದೀಗ ಖರೋಲಾ ಅವರ ನಿರ್ದೇಶನದಂತೆ ಆ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಸಂಸ್ಥೆಯ ವಕ್ತಾರ ಜಿ.ಪಿ. ರಾವ್‌ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.