ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಬೇಡ’

Last Updated 8 ಜನವರಿ 2018, 19:34 IST
ಅಕ್ಷರ ಗಾತ್ರ

ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಕೇವಲ ಚಿತ್ರಮಂದಿರಗಳಲ್ಲಿ ಮಾತ್ರವಲ್ಲ, ಶಿಕ್ಷಣ ಸಂಸ್ಥೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ ಮಾಡುವಂತೆ ಕೇಂದ್ರ ಸರ್ಕಾರ ಈ ಹಿಂದೆ ವಕಾಲತ್ತು ವಹಿಸಿತ್ತು. ಆದರೆ, ಇದೀಗ ಸರ್ಕಾರ ಏಕಾಏಕಿ ತನ್ನ ನಿಲುವು ಬದಲಿಸಿದೆ. ದೇಶಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ರಾಷ್ಟ್ರಗೀತೆ ಕಡ್ಡಾಯ ಆದೇಶ ರದ್ದು ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಸುಳಿವು ನೀಡಿತ್ತು.

ಇದರಿಂದ ತನ್ನ ನಿಲುವು ಬದಲಿಸಿದ ಕೇಂದ್ರ, ಈ ಸಂಬಂಧ ವಿಧಿ, ವಿಧಾನ ರೂಪಿಸಲು ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಆರು ತಿಂಗಳ ಒಳಗಾಗಿ ಸಮಿತಿ ವರದಿ ನೀಡಲಿದ್ದು, ಅಲ್ಲಿಯವರೆಗೆ ರಾಷ್ಟ್ರಗೀತೆ ಕಡ್ಡಾಯ ಬೇಡ ಎಂದು ಮನವಿ ಮಾಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರಗೀತೆ ನುಡಿಸುವ, ಹಾಡುವ ಸಂಬಂಧ ಸಮಿತಿ ಪರಾಮರ್ಶೆ ನಡೆಸಲಿದೆ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT