ಆರ್‌.ಪಿ.ಐ ದಕ್ಷಿಣ ಭಾರತದ ಮುಖಂಡರ ಸಮಾವೇಶ 11ಕ್ಕೆ

7

ಆರ್‌.ಪಿ.ಐ ದಕ್ಷಿಣ ಭಾರತದ ಮುಖಂಡರ ಸಮಾವೇಶ 11ಕ್ಕೆ

Published:
Updated:

ಬೆಂಗಳೂರು: ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದ ದಕ್ಷಿಣ ಭಾರತದ ಮುಖಂಡರ ಸಮಾವೇಶ ಇದೇ 11ರಂದು ಹೈದರಾಬಾದಿನಲ್ಲಿ ನಡೆಯಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಮದಾಸ ಆಠವಳೆ ನೇತೃತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ ಆರು ರಾಜ್ಯಗಳ ಮುಖಂಡರು ಭಾಗವಹಿಸುವರು.

ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಗೊಳಿಸುವ ಬಗ್ಗೆ ಚರ್ಚಿಸಲಾಗುವುದು’ ಎಂದರು.

‘ಫೆಬ್ರುವರಿ 15ರಂದು ನಗರದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಲಾಗುವುದು. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry