ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಜೆಡಿಎಸ್‌ ಸಮಾವೇಶಕ್ಕೆ ಮಧು ಬಂಗಾರಪ್ಪ

Last Updated 9 ಜನವರಿ 2018, 6:42 IST
ಅಕ್ಷರ ಗಾತ್ರ

ದೇವನಹಳ್ಳಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಜ.10 ರಂದು ತಾಲ್ಲೂಕಿನ ಚಪ್ಪರದಕಲ್ಲು ಬಳಿ ನಡೆಯಲಿರುವ ಜಿಲ್ಲಾ ಮಟ್ಟದ ಯುವ ಜನತಾದಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.

ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಯುವ ಜನತಾದಳ ಸಮಾವೇಶ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ 20 ತಿಂಗಳ ಅವಧಿಯ ಆಡಳಿತ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಆನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಿಂದ ಬರುವ ಯುವ ಜನತಾದಳ ಮತ್ತು ಜನತಾದಳ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಪಕ್ಷದ ಶಕ್ತಿಯನ್ನು ಪ್ರದರ್ಶಿಸಲು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬ ಕಾರ್ಯಕರ್ತರು, ವಿವಿಧ ಘಟಕದ ಪದಾಧಿಕಾರಿಗಳು ಸ್ವಯಂಪ್ರೇರಿತರಾಗಿ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮುನೇಗೌಡ ಮತ್ತು ಯುವ ಜನತಾದಳ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲ್ ಮಾತನಾಡಿ, 2018ರ ವಿಧಾನಸಭೆ ಚುನಾವಣೆ ಹತ್ತಿರ ಸಮೀಪಿಸುತ್ತಿದೆ. ಯುವ ಜನತಾದಳ ಸಮಾವೇಶದ ಮೂಲಕ ಕ್ಷೇತ್ರದ ಮತದಾರರಿಗೆ ಪ್ರಾದೇಶಿಕ ಪಕ್ಷದ ಅನಿರ್ವಾಯತೆಯ ಸ್ಪಷ್ಟ ಸಂದೇಶ ನೀಡಬೇಕಾಗಿದೆ ಎಂದರು.

‘ಕುಮಾರಣ್ಣರನ್ನು ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಾಡುವ ಏಕೈಕ ಗುರಿ ಈಡೇರಿಸುವುದು ನಮ್ಮೆಲ್ಲರ ಜಾವಾಬ್ದಾರಿಯಾಗಿದೆ’ ಎಂದರು. ಜೆಡಿಎಸ್ ತಾಲ್ಲೂಕು ಘಟಕದ ಕಾರ್ಯಧ್ಯಕ್ಷ ಆರ್.ಮುನೇಗೌಡ, ಅಧ್ಯಕ್ಷ ಬಿ.ಶ್ರೀನಿವಾಸ್ ಮಾತನಾಡಿ ಸಮಾವೇಶದಲ್ಲಿ ಕನಿಷ್ಠ 12 ರಿಂದ 15 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಕರ್ತರು ಶಿಸ್ತಿನಿಂದ ಭಾಗವಹಿಸಬೇಕು, ಅಹಿತಕರ ಘಟನೆಗೆ ಪಕ್ಷದಲ್ಲಿ ಅವಕಾಶವಿಲ್ಲ. ಬೆಳಿಗ್ಗೆ 10ಕ್ಕೆ ಸಮಾವೇಶ ಆರಂಭವಾಗಲಿದ್ದು, ಸಕಾಲದಲ್ಲಿ ಭಾಗವಹಿಸಬೇಕು ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ತಾಲ್ಲೂಕು ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಎಪಿಎಂಸಿ ನಿರ್ದೆಶಕ ಕೆ.ವಿ.ಮಂಜುನಾಥ್, ಟಿ.ಎ.ಪಿ.ಎಂ.ಸಿ.ಎಸ್ ನಿರ್ದೆಶಕ ಮಂಡಿಬೆಲೆ ರಾಜಣ್ಣ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮಹೇಶ್, ಯುವ ಜನತಾದಳ ತಾಲ್ಲೂಕು ಘಟಕದ ಅಧ್ಯಕ್ಷ ಭರತ್, ಪ್ರಧಾನ ಕಾರ್ಯದರ್ಶಿ ಟಿ.ರವಿ, ಮಾಹಿತಿ ತಂತ್ರಜ್ಞಾನ ಘಟಕದ ಅಧ್ಯಕ್ಷ ಅನಿಲ್ ಯಾದವ್, ಜೆಡಿಎಸ್ ಜಿಲ್ಲಾ ಘಟಕದ ಹಿರಿಯ ಗೌರವಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ಮುಖಂಡ ವೀರಪ್ಪ, ರಂಗಸ್ವಾಮಿ, ಗೌರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT