ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

7

ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Published:
Updated:

ಚಿಕ್ಕಮಗಳೂರು: ಕೋರೆಗಾಂವ್ ವಿಜಯೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಈಚೆಗೆ ನಡೆದ ದಲಿತರ ಮೇಲಿನ ಹಲ್ಲೆ ಖಂಡಿಸಿ ದಲಿತ–ಪ್ರಗತಿಪರ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ‘ಶಿಕ್ಷಣ, ಉದ್ಯೋಗ ಒಳಗೊಂಡಂತೆ ಎಲ್ಲ ಕ್ಷೇತ್ರಗಳಲ್ಲಿ ದಲಿತರ ಏಳಿಗೆ ಹೊಂದುತ್ತಿದ್ದಾರೆ. ಅದನ್ನು ಸಹಿಸದ ಕೆಟ್ಟ ಮನಸ್ಥಿತಿಯವರು ಕೋರೆಗಾಂವ್ ವಿಜಯೋತ್ಸವ ಆಚರಣೆ ವೇಳೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಪ್ರತಿಭಟನಕಾರರು ದೂಷಿಸಿದರು.

‘ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ಮತ್ತು ಉಡುಪಿ ಪೇಜಾವರ ಮಠದ ಸ್ವಾಮೀಜಿ ಅವರು ಸಂವಿಧಾನ ಬದಲಿಸುವ ಹೇಳಿಕೆ ನೀಡಿ, ದಲಿತರ ಭಾವನೆಗಳ ಮೇಲೆ ದಾಳಿ ನಡೆಸಿದ್ದಾರೆ. ದಲಿತ ವಿರೋಧಿ ಮನಸ್ಥಿತಿ ಉಳ್ಳವರಿಗೆ ಎಚ್ಚರಿಕೆ ನೀಡಲು ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.

ದಲಿತ ಜಾಗೃತಿ ವೇದಿಕೆ ಕೆ.ಜೆ.ಮಂಜುನಾಥ್, ದಲಿತ ಸಂಘರ್ಷ ಸಮಿತಿ ರಾಝ್ಯ ಸಂಘಟನ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್, ಜಿಲ್ಲಾ ಸಂಚಾಲಕ ವಸಂತಕುಮಾರ್, ಕೋಮು ಸೌಹಾರ್ಧ ವೇದಿಕೆ ರಾಜ್ಯ ಘಟಕದ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry