ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಆದೇಶ

Last Updated 9 ಜನವರಿ 2018, 8:44 IST
ಅಕ್ಷರ ಗಾತ್ರ

ನವದೆಹಲಿ: ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ, ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ 2016ರಲ್ಲಿ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಪರಿಷ್ಕರಿಸಿದೆ.

ರಾಷ್ಟ್ರಗೀತೆ ಕಡ್ಡಾಯ ವಿಷಯಕ್ಕೆ ಸಂಬಂದಿಸಿ ವಿಧಿ, ವಿಧಾನ ರೂಪಿಸಲು 12 ಸದಸ್ಯರನ್ನೊಳಗೊಂಡ ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ ಎಂದು ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಹಿಂದಿನ ಆದೇಶವನ್ನು ಪರಿಷ್ಕರಿಸಿತು.

ದೇಶಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ರಾಷ್ಟ್ರಗೀತೆ ಕಡ್ಡಾಯ ಆದೇಶ ರದ್ದು ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಸುಳಿವು ನೀಡಿತ್ತು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT