ಜಮ್ಮು ಕಾಶ್ಮೀರ: ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

7

ಜಮ್ಮು ಕಾಶ್ಮೀರ: ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Published:
Updated:
ಜಮ್ಮು ಕಾಶ್ಮೀರ: ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಅನಂತನಾಗ್‌ ಜಿಲ್ಲೆಯಲ್ಲಿ ಭದ್ರತಾಪಡೆ ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ಅನಂತನಾಗ್‌ ಜಿಲ್ಲೆಯ ಕೊಕರ್‌ನಾಗ್‌ ವ್ಯಾಪ್ತಿಯ ಲಾರ್ನೊ ಪ್ರದೇಶದಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ಅಧಿಕಾರಿ ಹೇಳಿದ್ದಾರೆ.

ಈ ವರೆಗೆ ಲಭ್ಯವಾಗಿರುವ ಮಾಹಿತಿಯಂತೆ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ.

ಹತ್ಯೆಯಾಗಿರುವ ಉಗ್ರರ ಗುರುತು ಪತ್ಯೆ ಮಾಡಬೇಕಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry