ಗ್ರಾ.ಪಂ. ಮಾಜಿ ಅಧ್ಯಕ್ಷನಿಂದ ದಲಿತ ಮಹಿಳೆ ಮೇಲೆ ಅತ್ಯಾಚಾರ

7

ಗ್ರಾ.ಪಂ. ಮಾಜಿ ಅಧ್ಯಕ್ಷನಿಂದ ದಲಿತ ಮಹಿಳೆ ಮೇಲೆ ಅತ್ಯಾಚಾರ

Published:
Updated:

ಶೃಂಗೇರಿ: ತಾಲ್ಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನರೇಂದ್ರ ಹೆಗ್ಡೆ ವಿರುದ್ಧ ಮಂಗಳವಾರ ಶೃಂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ನಡೆಸಿದ ನಂತರ ಪಾನಮತ್ತರಾಗಿದ್ದ ನರೇಂದ್ರ ಹೆಗ್ಡೆ ಹೆಬ್ಬಾರಗದ್ದೆಯಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ಮಹಿಳೆ ದೂರು ದಾಖಲಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಶಬರಿಮಲೆ ಭಕ್ತರಾಗಿ ಮಾಲಾಧಾರಿಯಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಠಾಣೆಯಲ್ಲಿ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ದೂರು ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry