ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತೀರ್ಪು ಅಡ್ಡಿ

7
ಕಿಮ್ಸ್‌ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಪ್ರಕರಣ

ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತೀರ್ಪು ಅಡ್ಡಿ

Published:
Updated:

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ ಎಂದು ಆರೋಪಿಸಿ, ಮೃತಪಟ್ಟ ಯುವಕ ಪ್ರವೀಣ ಮೋಳೆ ಪೋಷಕರು ದೂರು ನೀಡಿದ್ದು,  ಎಫ್‌ಐಆರ್ ದಾಖಲಿಸಿಕೊಳ್ಳಲು ಪೊಲೀಸರಿಗೆ ಸುಪ್ರೀಂ ಕೋರ್ಟ್‌ ತೀರ್ಪು ಅಡ್ಡಿಯಾಗಿದೆ.

‘ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ದೂರು ನೀಡಿದ ತಕ್ಷಣ ಪ್ರಕರಣ ದಾಖಲಿಸುವಂತಿಲ್ಲ. 7 ದಿನ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿರುವುದು ಸಾಬೀತಾದರಷ್ಟೇ ಎಫ್‌ಐಆರ್‌ ದಾಖಲಿಸಬೇಕು ಎಂದು ಸುಪ್ರೀಂ ಕೋರ್ಟ್ 2015ರಲ್ಲಿ ಲಲಿತ್ ಕುಮಾರ್ ಎಂಬವರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಪ್ರಕರಣದ ತನಿಖೆ ಈಗಾಗಲೇ ಆರಂಭವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯುವಕನ ಮರಣೋತ್ತರ ಪರೀಕ್ಷೆ‌ಯನ್ನು ಧಾರವಾಡದ ವೈದ್ಯರಿಂದ ನಡೆಸಿ, ಚಿತ್ರೀಕರಿಸಿಕೊಳ್ಳಲಾಗಿದೆ. ಅಗತ್ಯ ದಾಖಲೆಗಳನ್ನು ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry