ಪ್ರಧಾನಿ ಮೋದಿ ಸ್ವಂತ ಹಣದಲ್ಲಿ ಪ್ರವಾಸ ಮಾಡುತ್ತಾರಾ?: ಸಿ.ಎಂ

7

ಪ್ರಧಾನಿ ಮೋದಿ ಸ್ವಂತ ಹಣದಲ್ಲಿ ಪ್ರವಾಸ ಮಾಡುತ್ತಾರಾ?: ಸಿ.ಎಂ

Published:
Updated:
ಪ್ರಧಾನಿ ಮೋದಿ ಸ್ವಂತ ಹಣದಲ್ಲಿ ಪ್ರವಾಸ ಮಾಡುತ್ತಾರಾ?: ಸಿ.ಎಂ

ಉಡುಪಿ: ‘ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಹಣದಲ್ಲಿ ಪ್ರವಾಸ ಮಾಡುತ್ತಾರಾ, ವಿದೇಶಗಳಿಗೆ ಭೇಟಿ ನೀಡುತ್ತಾರಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಾಧನ– ಸಂಭ್ರಮದ ಕಾರ್ಯಕ್ರಮದ ಹೆಸರಿನಲ್ಲಿ ಸರ್ಕಾರದ ಹಣದಲ್ಲಿ ಪಕ್ಷದ ಕಾರ್ಯಕ್ರಮ ಆಯೋಜಿಸುತ್ತಿರುವ ಬಗ್ಗೆ ವಿರೋಧ ಪಕ್ಷಗಳ ಆರೋಪ ಕುರಿತು ಮಾಧ್ಯಮ ಪ್ರತಿನಿಧಿಗಳು ಮಂಗಳವಾರ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಏನೇ ರಣತಂತ್ರ ಮಾಡಿದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಅದ್ಯಾವುದೂ ನಡೆಯದು. ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸಲು ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆನಂತರ ಅವರು ಹತಾಶರಾಗಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ತಂತ್ರ ರೂಪಿಸಿವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ’ ಎಂದರು.

‘ರಾಜ್ಯದಲ್ಲಿ ಸತತ ಎರಡು ವರ್ಷಗಳ ಕಾಲ ಭೀಕರ ಬರಗಾಲ ಬಂದ ಕಾರಣ ರೈತರಿಗೆ ತೊಂದರೆ ಆಗಿದೆ. ಅದೇ ಕಾರಣಕ್ಕೆ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ರೈತರಿಗೆ ಸರ್ಕಾರದ ವತಿಯಿಂದ ಸಹಾಯ ಮಾಡಲು ಪ್ರಯತ್ನಿಸಲಾಗಿದೆ’ ಎಂದರು.

‘ದೇವೇಗೌಡರೊಂದಿಗೆ ಇದ್ದಾಗ ಅವರನ್ನು ನೋಡಿದ್ದೇನೆ. ವಿರೋಧ ಪಕ್ಷದಲ್ಲಿದ್ದುಕೊಂಡೂ ಅವರನ್ನು ನೋಡಿದ್ದೇನೆ. ನೋಡಲು ಇನ್ನೇನು ಉಳಿದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry