ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನ್ವೀರ್ ಸೇಠ್‌ಗೆ ರವಿಪೂಜಾರಿ ಬೆದರಿಕೆ

Last Updated 9 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ತಮಗೆ ಭೂಗತ ಪಾತಕಿ ರವಿಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಅವರು ಮಂಗಳವಾರ ಡಿಜಿ–ಐಜಿಪಿ ನೀಲಮಣಿ ರಾಜು ಅವರಿಗೆ ದೂರು ಕೊಟ್ಟಿದ್ದಾರೆ.

‘ಅಂತರರಾಷ್ಟ್ರೀಯ ಸಂಖ್ಯೆಯಿಂದ ಕರೆಗಳು ಬರುತ್ತಿವೆ. ‘ನಾನು ರವಿಪೂಜಾರಿ ಮಾತನಾಡುತ್ತಿದ್ದೇನೆ. ₹ 10 ಕೋಟಿ ಕೊಡದಿದ್ದರೆ ನಿಮ್ಮನ್ನು ಜೀವಂತವಾಗಿ ಬಿಡುವುದಿಲ್ಲ’ ಎಂದು ಆ ವ್ಯಕ್ತಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ. ಆತನನ್ನು ಪತ್ತೆ ಮಾಡಿ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಸಚಿವರು ದೂರಿನಲ್ಲಿ ಕೋರಿದ್ದಾರೆ. ಆ ದೂರನ್ನು ಡಿಜಿಪಿ ಸೈಬರ್ ಕ್ರೈಂ ವಿಭಾಗಕ್ಕೆ ವರ್ಗಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT