ಬಜೆಟ್‌ ಪೂರ್ವಭಾವಿ ಚರ್ಚೆ 18ರಿಂದ

7

ಬಜೆಟ್‌ ಪೂರ್ವಭಾವಿ ಚರ್ಚೆ 18ರಿಂದ

Published:
Updated:
ಬಜೆಟ್‌ ಪೂರ್ವಭಾವಿ ಚರ್ಚೆ 18ರಿಂದ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 18ರಿಂದ ಫೆ. 5ರವರೆಗೆ  ಸಂಘಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಚರ್ಚೆ ನಡೆಸಲಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 18ರಂದು ರೈತ ಸಂಘ ಸಂಸ್ಥೆಗಳ ಜೊತೆ ಸಮಾಲೋಚನೆ ನಡೆಸುವ ಮೂಲಕ ಮುಖ್ಯಮಂತ್ರಿ ಈ ಪ್ರಕ್ರಿಯೆ ಆರಂಭಿಸಲಿದ್ದಾರೆ. ಮರುದಿನದಿಂದ ನಿರಂತರ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳ ಜೊತೆ ಶಕ್ತಿಭವನದಲ್ಲಿ ಚರ್ಚೆ ನಡೆಸುವರು.

ಫೆ. 6ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಅಹವಾಲು ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ. ಬಳಿಕ ಬಜೆಟ್‌ ರೂಪುರೇಷೆ ಸಿದ್ಧಪಡಿಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry