ಕಲಾರಂಗಕ್ಕೆ ಪಲಿಮಾರು ಸ್ವಾಮೀಜಿ ಭೇಟಿ

7

ಕಲಾರಂಗಕ್ಕೆ ಪಲಿಮಾರು ಸ್ವಾಮೀಜಿ ಭೇಟಿ

Published:
Updated:

ಉಡುಪಿ: ಭಾವಿ ಪರ್ಯಾಯ ಪೀಠಾಧಿಪತಿ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಅವರು ಯಕ್ಷಗಾನ ಕಲಾರಂಗದ ಕಚೇರಿಗೆ ಸೋಮವಾರ ಭೇಟಿ ನೀಡಿದರು. ಸಂಘದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯಕ್ಷಗಾನ ಕಲೆಯ ಮಹತ್ವದ ಬಗ್ಗೆ ಅವರು ಮಾತನಾಡಿದರು. ಪರ್ಯಾಯದ ಅವಧಿಯಲ್ಲಿ ಎಲ್ಲ ರೀತಿಯ ನೆರವು ನೀಡಲಾಗುವುದು. ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಾಗಲಿ ಎಂದು ಹಾರೈಸಿದರು.

ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಮಾತನಾಡಿ, ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಮಠಾಧೀಶರ ಪ್ರೋತ್ಸಾಹವೂ ಸಂಸ್ಥೆಯ ಬೆಳವಣಿಗೆಗೆ ಪ್ರಮುಖ ಕಾರಣ ಎಂದರು. ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಅವರು ವಿವರ ನೀಡಿದರು.

ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ ರಾವ್, ಉಪಾಧ್ಯಕ್ಷರಾದ ಎಸ್.ವಿ. ಭಟ್, ಎಂ. ಗಂಗಾಧರ ರಾವ್ ಸ್ವಾಮಿಜಿ ಅವರಿಗೆ ಫಲಸಮರ್ಪಣೆ ಮಾಡಿ ಆಶೀರ್ವಾದ ಯಾಚಿಸಿದರು. ಮಠದ ಪ್ರಹ್ಲಾದ ಆಚಾರ್ಯ, ರಘುವೀರ ಬಲ್ಲಾಳ್, ಶ್ರಿಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ಮಟ್ಟಿ ಲಕ್ಷ್ಮೀನಾರಾಯಣ ರಾವ್ ಅವರು ಸ್ವಾಮೀಜಿ ಅವರಿಗೆ ಪಾದಪೂಜೆ ಮಾಡಿದರು. ನಾಣ್ಯ ತುಲಾಭಾರವೂ ಸಂಪನ್ನಗೊಂಡಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry