ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾಭಿವೃದ್ಧಿಯಲ್ಲಿ ಪಾಲಕರ ಪಾತ್ರ ಹಿರಿದು: ‍ಪಂಪಾಪತಿ

Last Updated 10 ಜನವರಿ 2018, 6:39 IST
ಅಕ್ಷರ ಗಾತ್ರ

ಕನಕಗಿರಿ: ಶಾಲೆಗಳಿಗೆ ವಿಷಯವಾರು ಶಿಕ್ಷಕರು ಹಾಗೂ ಮೂಲ ಸೌಕರ್ಯ ಕಲ್ಪಿಸಿದಾಗ ಮಾತ್ರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಸಾಧ್ಯ ಎಂದು ಸೋಮಸಾಗರ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪಂಪಾಪತಿ ತರ್ಲಕಟ್ಟಿ ತಿಳಿಸಿದರು.

ಇಲ್ಲಿನ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಗಂಗಾವತಿ ಅವರ ಆಶ್ರಯದಲ್ಲಿ ಎಸ್‌ಡಿಎಂಸಿ ಸದಸ್ಯರಿಗೆ ಆಯೋಜಿಸಿದ್ದ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಸೋಮಸಾಗರ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಗೊಂಡು ನಾಲ್ಕು ವರ್ಷ ಕಳೆದರೂ ಶಿಕ್ಷಕರನ್ನು ನೇಮಕ ಮಾಡಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರದಿಂದ ಬೋಧನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.ಗಿ ಮಾತನಾಡಿ, ಕೊರತೆಗಳ ಮಧ್ಯೆಯೂ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಶಾಲಾಭಿವೃದ್ಧಿಯಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಹಿರಿದಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಮಧುಸೂದನ ಅರ್ಚಕ, ಸಮೂಹ ಸಂಪನ್ಮೂಲ ವ್ಯಕ್ತಿ ಮಾರುತಿ ಹಾದಿಮನಿ, ಎಸ್‌ಡಿಎಂಸಿ ಅಧ್ಯಕ್ಷ ಯಂಕಾರಡ್ಡಿ ಕೆರೆ ಮಾತನಾಡಿದರು. ಮದ್ದಾನಪ್ಪ ಹುಲಗಪ್ಪ, ಶಶಿಧರ ಬೋಂದಾಡೆ ಅವರು ಈ ವೇಳೆ ಇದ್ದರು.

ಗಂಗಾವತಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಸಂಘಟನೆ ಮಾಡುವಂತೆ ಶಾಸಕ ಇಕ್ಬಾಲ್ ಅನ್ಸಾರಿ ಸಲಹೆ ನೀಡಿದರು.

ಬಳ್ಳಾರಿ ಜಿಲ್ಲೆ ಚುನಾವಣಾ ಉಸ್ತುವಾರಿಯಾಗಿ ನೇಮಕವಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡದ ಪ್ರಧಾನ ಕಾರ್ಯದರ್ಶಿ ರಾಜು ನಾಯಕ್ ಅವರನ್ನು ಅಭಿನಂದಿಸಿ ಮಾತನಾಡಿದರು. ನಗರಸಭೆಯ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಮನೋಹರಸ್ವಾಮಿ ಮುದೇನೂರು, ಎಪಿಎಂಸಿಯ ಮಾಜಿ ನಿರ್ದೇಶಕ ರುದ್ರೇಶ ಡ್ಯಾಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT