ಬೆಳಗಾವಿ: ದಲಿತ ಸಂಘಟನೆಗಳಿಂದ ತೀವ್ರ ಪ್ರತಿಭಟನೆ, ಕಲ್ಲು ತೂರಾಟ

7

ಬೆಳಗಾವಿ: ದಲಿತ ಸಂಘಟನೆಗಳಿಂದ ತೀವ್ರ ಪ್ರತಿಭಟನೆ, ಕಲ್ಲು ತೂರಾಟ

Published:
Updated:
ಬೆಳಗಾವಿ: ದಲಿತ ಸಂಘಟನೆಗಳಿಂದ ತೀವ್ರ ಪ್ರತಿಭಟನೆ, ಕಲ್ಲು ತೂರಾಟ

ಬೆಳಗಾವಿ: ಮಹಾರಾಷ್ಟ್ರದ ಪುಣೆಯ ಭೀಮಾ ಕೋರೆಗಾಂವ್‌ನಲ್ಲಿ ನಡೆದಿದ್ದ ಗಲಭೆಯಲ್ಲಿ ಯುವಕನ ಸಾವು ಖಂಡಿಸಿ ವಿವಿಧ ದಲಿತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ನಗರದ ಚನ್ನಮ್ಮ ವೃತ್ತದಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಬಸ್ಸಿಗೆ ಕಲ್ಲು ತೂರಾಟ ಮಾಡಿದ್ದಾರೆ. ನಗರ ಸಾರಿಗೆ  ಬಸ್ ಹಾಗೂ ಎರಡು ಅಂಗಡಿಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಚನ್ನಮ್ಮ ವೃತ್ತದಲ್ಲಿ ಪೊಲಿಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.

ಕಲ್ಲು ತೂರಾಟಕ್ಕೆ ಸಿಲುಕಿ ಹಾನಿಗೊಳಗಾದ ಬಸ್

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಭೀಮಾ- ಕೋರೆಗಾಂವ್‌ ಘರ್ಷಣೆ ಪಡೆಯುವಲ್ಲಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry