ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

7

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Published:
Updated:

ಚಿಕ್ಕೋಡಿ: ‘ಚಿಕ್ಕೋಡಿ-ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಾಳಕಿ ಗ್ರಾಮದ ಸಮಗ್ರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 75 ಲಕ್ಷ ಅನುದಾನ ಮತ್ತು 59 ಅರ್ಹ ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿವೆ’ ಎಂದು ಕಂದಾಯ ಇಲಾಖೆ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ ಹೇಳಿದರು. ತಾಲ್ಲೂಕಿನ ವಾಳಕಿ ಗ್ರಾಮದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮತ್ತು ಮನೆಗಳ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.

‘ಗ್ರಾಮದ 59 ಅರ್ಹ ಬಡ ಫಲಾನುಭವಿಗಳಿಗೆ ಸುಸಜ್ಜಿತ ಮನೆ ಮಂಜೂರಾಗಿವೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಲಿತ ಕಾಲೊನಿಯಲ್ಲಿ ₹ 12 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ, ದಲಿತ ಕಾಲೊನಿಯಲ್ಲಿ ಪೇವರ ಅಳವಡಿಕೆ ಕಾಮಗಾರಿಗೆ ₹ 40 ಲಕ್ಷ , ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಯ ಪೈಪ್‌ಲೈನ್‌ ಕಾಮಗಾರಿಗೆ ₹ 60 ಲಕ್ಷ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗರಡಿ ಮನೆ ನಿರ್ಮಾಣ ಕಾಮಗಾರಿಗೆ ₹ 15 ಲಕ್ಷ ಅನುದಾನ ಮಂಜೂರಾಗಿದೆ’ ಎಂದರು.

ಸಂಸದ ಪ್ರಕಾಶ ಹುಕ್ಕೇರಿ ಮಾತನಾಡಿ, ‘ವಾಳಕಿ ಗ್ರಾಮದಲ್ಲಿ ನಿರೀಕ್ಷೆ ಮಾಡದಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿರುವುದು ಸಂತಸ ತಂದಿದೆ. ಮನೆ ಮಂಜೂರಾದ ಫಲಾನುಭವಿಗಳು ಶೀಘ್ರವಾಗಿ ಮನೆ ನಿರ್ಮಿಸಿಕೊಳ್ಳಲು ಆಸಕ್ತಿ ಮೂಡಿಸಿಕೊಳ್ಳಬೇಕು. ಅಧಿಕಾರಿಗಳು ಸಹ ಮನೆಗಳಿಗೆ ಮಂಜೂರಾದ ಅನುದಾನವನ್ನು ಹಂತ ಹಂತವಾಗಿ ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ಸೂಚನೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಮಹಾದೇವಿ ನಾಯಿಕ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಜಯಶ್ರೀ ನಾಯಿಕ, ಪಟ್ಟಣಕುಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿನೋದ ಕಾಗೆ, ಸುಜಯ ಕಾಕಾಸಾಹೇಬ ಪಾಟೀಲ, ಅಣ್ಣಾಸಾಹೇಬ ನಾಯಿಕ, ಲಕ್ಷ್ಮಣ ಸೂರ್ಯವಂಶಿ, ಪದ್ಮಾ ಗಸ್ತಿ, ಗಂಗೂಬಾಯಿ ಬರಗಾಲೆ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry