ದೇವಸ್ಥಾನದ ಗೋಪುರ ಉದ್ಘಾಟನೆ

7

ದೇವಸ್ಥಾನದ ಗೋಪುರ ಉದ್ಘಾಟನೆ

Published:
Updated:

ಡಂಬಳ: ಇಲ್ಲಿನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಪ್ಪತ್ತಮಲ್ಲೇಶ್ವರ ದೇವಸ್ಥಾನದ ಗೋಪಾರ ಲೋಕಾರ್ಪಣೆ ಫೆ.10 ರಂದು ನಡೆಯಲಿದೆ. ಅಂದಾಜು ₹ 25 ಲಕ್ಷ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ಸುಣ್ಣ ಬಣ್ಣ ಹಚ್ಚುವ ಕಾರ್ಯ ಭರದಿಂದ ನಡೆಯುತ್ತಿದೆ. ಭಕ್ತರಲ್ಲಿ ಹರ್ಷವನ್ನು ಉಂಟು ಮಾಡಿದೆ.

ಶರಣೆ ಗಿರಿಜಕ್ಕ ಧರ್ಮರಡ್ಡಿ ಅವರು ಹೇಮರಡ್ಡಿ ಮಲ್ಲಮ್ಮನ ಪ್ರವಚನ ನೀಡಲಿದ್ದಾರೆ. ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ ವೇಮನಾನಂದ ಸ್ವಾಮೀಜಿ, ಶಾಸಕ ಜಿ.ಎಸ್.ಪಾಟೀಲ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್ ಕಮಿಟಿ ಅಧ್ಯಕ್ಷ ಮುತ್ತಣ್ಣ ಕೊಂತಿಕೊಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry