ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ಮಹಿಳೆಯರ ತಂಡ ಪ್ರಕಟ: ಕರ್ನಾಟಕದ ವೇದಾ, ರಾಜೇಶ್ವರಿಗೆ ಸ್ಥಾನ

Last Updated 10 ಜನವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕರ್ನಾಟಕದ ಬ್ಯಾಟ್ಸ್‌ವುಮನ್‌ ವೇದಾಕೃಷ್ಣಮೂರ್ತಿ ಹಾಗೂ ಬೌಲರ್ ರಾಜೇಶ್ವರಿ ಗಾಯಕವಾಡ್‌ ಮುಂದಿನ ತಿಂಗಳು ಏಕದಿನ ಸರಣಿ ಆಡಲು ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಮಾಡಲಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸರಣಿಯಲ್ಲಿ ಭಾರತ ತಂಡ ಮೂರು ಪಂದ್ಯಗಳನ್ನು ಆಡಲಿದೆ. ಮಿಥಾಲಿ ರಾಜ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಉಪನಾಯಕಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಬುಧವಾರ ಬಿಸಿಸಿಐ ಭಾರತದ 16 ಆಟಗಾರ್ತಿಯರ ತಂಡವನ್ನು ಪ್ರಕಟಿಸಿದೆ. ಫೆಬ್ರುವರಿ 5ರಿಂದ ಪಂದ್ಯಗಳು ಆರಂಭವಾಗಲಿವೆ. ಏಕದಿನ ಸರಣಿಯ ಬಳಿಕ ಭಾರತ ಟಿ–20 ಪಂದ್ಯಗಳನ್ನು ಆಡಲಿದೆ. ಆದರೆ ಚುಟುಕು ಸರಣಿಗೆ ತಂಡವನ್ನು ತಡವಾಗಿ ಪ್ರಕಟಿಸುವುದಾಗಿ ಬಿಸಿಸಿಐ ಹೇಳಿದೆ.

ತಂಡ ಇಂತಿದೆ: ಮಿಥಾಲಿ ರಾಜ್‌ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪ ನಾಯಕಿ), ಸುಷ್ಮಾ ವರ್ಮಾ (ವಿಕೆಟ್ ಕೀಪರ್‌), ಏಕ್ತಾ ಬಿಷ್ಠ್‌, ಸ್ಮೃತಿ ಮಂದಾನ, ಪೂನಮ್ ಯಾದವ್‌, ರಾಜೇಶ್ವರಿ ಗಾಯಕವಾಡ್‌, ಜೆಮ್ಮಿ ರೋಡ್ರಿಗಸ್‌, ಜೂಲನ್ ಗೋಸ್ವಾಮಿ, ದೀಪ್ತಿ ಶರ್ಮಾ, ಶಿಖಾ ಪಾಂಡೆ, ಮೋನಾ ಮೆಷ್ರಮ್‌, ಪೂಜಾ ವಸ್ತ್ರಾಕರ್‌, ವೇದಾ ಕೃಷ್ಣಮೂರ್ತಿ, ತನಿಯಾ ಭಾಟಿಯಾ (ವಿಕೆಟ್ ಕೀಪರ್‌).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT