ಕಾರ್ಯಪ್ಪಗೆ ಭಾರತ ರತ್ನ: ನೀಡಲು ಕೇಂದ್ರಕ್ಕೆ ಪತ್ರ

7
ಮಡಿಕೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕಾರ್ಯಪ್ಪಗೆ ಭಾರತ ರತ್ನ: ನೀಡಲು ಕೇಂದ್ರಕ್ಕೆ ಪತ್ರ

Published:
Updated:

ಮಡಿಕೇರಿ: ಪ್ರಥಮ ಸೇನಾ ದಂಡನಾಯಕರಾಗಿದ್ದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಬುಧವಾರ ಹೇಳಿದರು.

‘ಭಾರತ ರತ್ನವನ್ನು ಕೇಂದ್ರ ಸರ್ಕಾರವೇ ನೀಡುವುದರಿಂದ ರಾಜ್ಯ ಸರ್ಕಾರದ ಪರವಾಗಿ ಶೀಘ್ರವೇ ಪತ್ರ ಬರೆಯುತ್ತೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೊಡಗು ಜಿಲ್ಲೆಯ ಗೋಣಿಕೊಪ್ಪಲಿಗೆ ಇತ್ತೀಚೆಗೆ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬಂದಿದ್ದ ಭೂಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಸಹ ಕಾರ್ಯಪ್ಪ ಅವರಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದರು. ಜತೆಗೆ, ಮಂಗಳವಾರ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಅವರೂ ಈ ಸಂಬಂಧ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry