ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: 16 ವರ್ಷಗಳ ಬಳಿಕ ಆರೋಪಿ ಬಂಧನ

Last Updated 10 ಜನವರಿ 2018, 19:30 IST
ಅಕ್ಷರ ಗಾತ್ರ

ಅಹಮದಾಬಾದ್ : 2002ರ ಗುಲ್ಬರ್ಗ್ ಹತ್ಯಾಕಾಂಡ ಪ್ರಕರಣದ ಆರೋಪಿಯನ್ನು 16 ವರ್ಷಗಳ  ಬಳಿಕ ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಐವರ ಪೈಕಿ ಆಶಿಶ್ ಪಾಂಡೆ ಎಂಬಾತನನ್ನು ಇಲ್ಲಿನ ಅಸ್ಲಾಲಿ ಪ್ರದೇಶದಲ್ಲಿ ಅಪರಾಧ ತನಿಖಾ ದಳದ ಸಿಬ್ಬಂದಿ ಬಂಧಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2002ರ ಫೆಬ್ರುವರಿ 28ರಂದು ಮುಸ್ಲಿಂ ಕಾಲನಿ ಮೇಲೆ ಉದ್ರಿಕ್ತರ ಗುಂಪೊಂದು ದಾಳಿ ನಡೆಸಿ 69 ಜನರನ್ನು ಹತ್ಯೆ ಮಾಡಿತ್ತು. ಈ ಪೈಕಿ ಕಾಂಗ್ರೆಸ್ ಮಾಜಿ ಸಂಸದ ಎಹಸಾನ್ ಜಾಫ್ರಿ ಕೂಡಾ ಮೃತಪಟ್ಟಿದ್ದರು. ಗೋಧ್ರೋತ್ತರ ಗಲಭೆಗಳಲ್ಲಿ ಇದು ಅತ್ಯಂತ ಹೀನ ಘಟನೆಯಾಗಿತ್ತು.

ಎಫ್‌ಐಆರ್ ದಾಖಲಾದ ದಿನದಿಂದಲೂ ಪಾಂಡೆ ತಲೆಮರೆಸಿಕೊಂಡಿದ್ದ. ನರೋಡಾದಲ್ಲಿ ತನ್ನ ಕುಟುಂಬದ ಜತೆ ವಾಸವಿದ್ದ ಆರೋಪಿ, ಬಂಧನದಿಂದ ತಪ್ಪಿಸಿಕೊಳ್ಳಲು ಹರಿದ್ವಾರ, ವಾಪಿ ಸೇರಿದಂತೆ ಹಲವು ಜಾಗಗಳಿಗೆ ತನ್ನ ವಾಸಸ್ಥಳ ಬದಲಾಯಿಸಿಕೊಂಡಿದ್ದ. ಸಾರಿಗೆ ಉದ್ಯಮದಲ್ಲಿ ಕೆಲಸಗಾರನಾಗಿ ದುಡಿಯುತ್ತಿದ್ದ. ತನ್ನ ಕೆಲಸದ ನಿಮಿತ್ತ ಪಾಂಡೆ ನಗರದಲ್ಲಿ ಇದ್ದಾನೆ ಎಂಬ ಸುಳಿವು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಲಾಗಿದ್ದು, ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

2016ರಲ್ಲಿ ವಿಶೇಷ ನ್ಯಾಯಾಲಯವು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇತರ 36 ಮಂದಿಯನ್ನು ದೋಷಮುಕ್ತಗೊಳಿಸಿತ್ತು. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT