ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

7
ಸಾವಿನ ಪ್ರಕರಣ ಖಂಡಿಸಿ ತಾಲ್ಲೂಕು ಕಚೇರಿ ಎದುರು ಎನ್‌ಎಸ್‌ಯುಐ ಪ್ರತಿಭಟನೆ

ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Published:
Updated:
ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಕ್ಕಬಳ್ಳಾಪುರ: ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಜರುಗಿಸಬೇಕು ಎಂದು ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.

ವಾಪಸಂದ್ರದಲ್ಲಿರುವ ಜಚನಿ ಕಾಲೇಜಿನಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್‌.ಎಸ್‌.ಯು.ಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನಿಂದ್ರ, ‘ಒಂದೆಡೆ ರಾಜ್ಯದಲ್ಲಿ ಹೊತ್ತಿ ಉರಿಯುತ್ತಿರುವ ಕೋಮುವಾದದ ಜ್ವಾಲೆಯಿಂದ ಜನತೆ ನಲುಗುತ್ತಿದ್ದರೆ, ಇನ್ನೊಂದೆಡೆ ಇಡೀ ಸಮಾಜವೇ ತಲೆತಗ್ಗಿಸುವ ಹೇಯ ಕೃತ್ಯಗಳು ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವುದು ಶೋಚನೀಯ ಸಂಗತಿ’ ಎಂದು ಹೇಳಿದರು.

‘ಶಾಂತಿ, ಸಹಬಾಳ್ವೆಗೆ ಸಂಕೇತವಾ ಗಿರುವ ದೇಶದಲ್ಲಿ ಕೋಮು ದಳ್ಳುರಿ ಹೆಚ್ಚಿ ಅಮಾಯಕರನ್ನು ಬಲಿ ಪಡೆಯುತ್ತಿ ರುವುದು ಕಳವಳಕಾರಿ ಸಂಗತಿ. ಇಂತಹ ಗಲಭೆಗಳನ್ನು ಹತ್ತಿಕ್ಕಲು ಮತ್ತೊಮ್ಮೆ ಸ್ವಾತಂತ್ರ್ಯ ಸಂಗ್ರಾಮ ನಡೆಸುವ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಕೊಲೆ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಒಡ್ಡುವ ಪ್ರಕರಣಗಳಿಂದಾಗಿ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವ ರಣ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಇದನ್ನು ಹೋಗಲಾಡಿಸುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.

‘ಇವತ್ತು ವಿದ್ಯಾರ್ಥಿ ಸಮುದಾಯ ದಲ್ಲಿ ಕೂಡ ಕೋಮುವಾದದ ವಿಷ ಬೀಜ ಬಿತ್ತುತ್ತಿರುವ ಸಂಘಟನೆ ಗಳನ್ನು ಸಂಪೂರ್ಣವಾಗಿ ನಿಷೇಧಿಸ ಬೇಕು. ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಹೇಯ ಕೃತ್ಯ ತಡೆಯಲು ಪುಂಡಾಟಿಕೆ ಪ್ರದರ್ಶಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿ ನೆಲೆಯೂರಿರುವ ಭಯದ ಕಾರ್ಮೋಡವನ್ನು ತೊಡೆದುಹಾಕಬೇಕು’ ಎಂದು ಒತ್ತಾಯಿಸಿದರು.

‘ಧನ್ಯಶ್ರೀ ಮುಸ್ಲಿಂ ಯುವಕನ ಜೊತೆ ಓಡಾಡುತ್ತಿದ್ದು, ಇದರಿಂದ ಲವ್‌ ಜಿಹಾದ್‌ಗೆ ಅವಕಾಶ ಮಾಡಿಕೊಟ್ಟಂತಾಗುತ್ತಿದೆ ಎಂದು ಆರೋಪಿಸಿದ್ದ ಐವರು ಯುವಕರು, ಯುವತಿಯ ಮನೆಗೆ ಹೋಗಿ ಬೆದರಿಕೆ ಹಾಕಿದ್ದರು. ಜತೆಗೆ ತಾಯಿಯನ್ನೂ ನಿಂದಿಸಿದ್ದರು. ಆ ಎಲ್ಲ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮ ಜರುಗಿಸಿ ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂದು ತಿಳಿಸಿದರು.

ಮುಖಂಡರಾದ ನಾಗೇಶ್, ವಿಶ್ವಾಸ್, ವೆಂಕಟೇಶ್, ಪ್ರವೀಣ್, ಮಂಜುಳಾ, ರತ್ನಾ, ಅನುಷಾ, ದಿವ್ಯಾ, ಭಾರತಿ, ಮಂಜುನಾಥ್, ರವಿಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry