ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಮಹದಾಯಿ ಧರಣಿ 911ನೇ ದಿನಕ್ಕೆ; ರೈತರ ಆಕ್ರೋಶ
Last Updated 11 ಜನವರಿ 2018, 7:04 IST
ಅಕ್ಷರ ಗಾತ್ರ

ನರಗುಂದ: ‘ಮಹದಾಯಿ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಚುನಾವಣೆ ನಡೆಸಲು ಬಿಡುವುದಿಲ್ಲ’ ಎಂದು ಮಹದಾಯಿ ಹೋರಾಟ ಸಮಿತಿಯ ಸದಸ್ಯ ಚಂದ್ರಗೌಡ ಪಾಟೀಲ ಹೇಳಿದರು.

ಪಟ್ಟಣದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 911ನೇ ದಿನ ಬುಧವಾರ ಅವರು ಮಾತನಾಡಿದರು.

‘ಮಹದಾಯಿಗಾಗಿ ರೈತರು ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು ಇದರತ್ತ ಗಮನಹರಿಸುತ್ತಿಲ್ಲ. ಚುನಾವಣೆಗಾಗಿ ಎಲ್ಲರು ಸಮಾವೇಶ, ಯಾತ್ರೆ, ಜಾತ್ರೆ ಮಾಡುತ್ತಾ ಹೊರಟರೆ ರೈತರ ಕೂಗು ಕೇಳುವವರಾರು? ಈ ಕುರಿತು ಬಗ್ಗೆ ಗಂಭಿರ ಚಿಂತನೆ ನಡೆಯಬೇಕು’ ಎಂದು ಆಗ್ರಹಿಸಿದರು.

‘ವಿಧಾನಸಭೆ ಚುನಾವಣೆ ನಡೆಸದಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಿದರೆ, ಚುನಾವಣೆ ಬಹಿಷ್ಕರಿಸಲಾಗುವುದು. ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಲಾಗುವುದು’ ಎಂದರು.

‘ಗೋವಾ ಮಹದಾಯಿ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಕರ್ನಾಟಕದಿಂದ ಎಲ್ಲವನ್ನೂ ಪಡೆದಿರುವ ಗೋವಾ, ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಇದೇ ಧೋರಣೆ ಮುಂದುವರಿಸಿದರೆ, ಕನ್ನಡಿಗರು ತಕ್ಕ ಉತ್ತರ ನೀಡಬೇಕು’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ಅರ್ಜುನ ಮಾನೆ ಹೇಳಿದರು.

‘ರಾಜ್ಯದ 28 ಸಂಸದರು ಲೋಕಸಭೆಯಲ್ಲಿ ಮಹದಾಯಿಗಾಗಿ ಒಗ್ಗಟ್ಟಿನಿಂದ ಪ್ರಯತ್ನ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದರು.

ಧರಣಿಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ, ಸುಭಾಸ ಗಿರಿಯಣ್ಣವರ, ವೆಂಕಪ್ಪ ಹುಜರತ್ತಿ, ಎಸ್.ಬಿ.ಜೋಗಣ್ಣವರ, ವೀರಣ್ಣ ಸೊಪ್ಪಿನ, ಚನ್ನಪ್ಪಗೌಡ ಪಾಟೀಲ, ಎಲ್‌.ಬಿ.ಮುನೇನಕೊಪ್ಪ, ಬಸಪ್ಪ ತೆಗ್ಗಿನಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT