ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಪೂರೈಕೆಗೆ ಒತ್ತಾಯ

Last Updated 11 ಜನವರಿ 2018, 8:21 IST
ಅಕ್ಷರ ಗಾತ್ರ

ಕಲಬುರ್ಗಿ: ಹನುಮಾನ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಅಲ್ಲಿನ ನಿವಾಸಿಗಳು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ–ಸಿ) ನೇತೃತ್ವದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು.

ಎರಡು ವರ್ಷಗಳಿಂದ ಕುಡಿಯುವ ನೀರಿಗೆ ಪರದಾಡುತ್ತಿದ್ದೇವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಒಳಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಚರಂಡಿ ನೀರು ಮನೆ ಒಳಗೆ ಹರಿದು ಬರುತ್ತಿದೆ. ಆದ್ದರಿಂದ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಯುಸಿಐನ ಎಸ್.ಎಂ.ಶರ್ಮಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT