ಗಣಿತ, ವಿಜ್ಞಾನಕ್ಕೆ ಮಹತ್ವ ನೀಡಿ

7

ಗಣಿತ, ವಿಜ್ಞಾನಕ್ಕೆ ಮಹತ್ವ ನೀಡಿ

Published:
Updated:

ಮಳವಳ್ಳಿ: ಪ್ರೌಢಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣವನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡುವುದಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಸರ್ವ ಶಿಕ್ಷಣ ಅಭಿಯಾನದ ರಾಮು ತಿಳಿಸಿದರು.

ಪಟ್ಟಣದ ಕೋಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಮಾಜ ವಿಜ್ಞಾನ ವಿಷಯ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

2017-18ನೇ ಸಾಲಿನ ಶೈಕ್ಷಣಿಕ ವರ್ಗದಲ್ಲಿ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶೈಕ್ಷಣಿಕ ಮತ್ತು ಗುಣಾತ್ಮಕ ಶಿಕ್ಷಣವನ್ನು ಅಭಿವೃದ್ಧಿಪಡಿಸಬೇಕು ಎಂಬ ಕಾರಣದಿಂದ ಇಲಾಖೆ ಪ್ರಾಯೋಗಿಕ ಕಲಿಕಾ ವಿಧಾನ ಎಂಬ ಕಾರ್ಯ ಹಮ್ಮಿಕೊಂಡಿದೆ ಎಂದು ಹೇಳಿದರು.

ಭಾರತೀ ಕಾಲೇಜಿನ ಅರ್ಥಶಾಸ್ತ್ರ ಮುಖ್ಯಸ್ಥ ಬಿ.ಎಸ್‌.ಬೋರೇಗೌಡ ವಿಷಯ ಮಂಡನೆ ಮಾಡಿ ಸ್ವಾತಂತ್ರ್ಯ ಪೂರ್ವ, ಸ್ವಾತಂತ್ರ್ಯ ನಂತರ ಹಾಗೂ ಪ್ರಸ್ತುತ ಆರ್ಥಿಕ ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು.

ಶಿಕ್ಷಣಾಧಿಕಾರಿ ಚಂದ್ರಕಲಾ, ವಿಷಯ ಪರಿವೀಕ್ಷಕಿ ಲಕ್ಷ್ಮಿ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಯೋಗೇಶ್, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಭಾಸ್ಕರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry