ಸಂಕ್ರಾಂತಿಗೆ 300 ವಿಶೇಷ ಬಸ್

7

ಸಂಕ್ರಾಂತಿಗೆ 300 ವಿಶೇಷ ಬಸ್

Published:
Updated:

ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 300 ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಶುಕ್ರವಾರ ಮತ್ತು ಶನಿವಾರ (ಇದೇ 12 ಮತ್ತು 13ರಂದು) ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. ಹೊರ ಜಿಲ್ಲೆಗಳಿಂದ 15 ಮತ್ತು 16ರಂದು ವಾಪಸ್ ಬರಲಿವೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಾಸನ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಬಸ್‌ಗಳು ಹೊರಡಲಿವೆ.

ಮೈಸೂರು, ಮಡಿಕೇರಿ ಭಾಗಕ್ಕೆ ತೆರಳುವ ಬಸ್‌ಗಳು ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಹಾಗೂ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕಡೆಗೆ ಹೋಗುವ ಬಸ್‌ಗಳು ಶಾಂತಿನಗರದ ಟಿಟಿಎಂಸಿ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ವಿವಿಧ ಸ್ಥಳಗಳಿಂದಲೂ ಬಸ್‌ಗಳು ಹೊರಡಲಿವೆ ಎಂದು ಅವರು ವಿವರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry