ಗಣಿ ಉದ್ಯಮಿ ಮನೆ ಮೇಲೆ ಐಟಿ ದಾಳಿ

7

ಗಣಿ ಉದ್ಯಮಿ ಮನೆ ಮೇಲೆ ಐಟಿ ದಾಳಿ

Published:
Updated:
ಗಣಿ ಉದ್ಯಮಿ ಮನೆ ಮೇಲೆ ಐಟಿ ದಾಳಿ

ತಿಪಟೂರು: ತಾಲ್ಲೂಕು ಜೆಡಿಎಸ್ ಅಧ್ಯಕ್ಷ, ಚಲನಚಿತ್ರ ನಿರ್ಮಾಪಕ, ಗಣಿ ಉದ್ಯಮಿ ಜಕ್ಕನಹಳ್ಳಿ ಲಿಂಗರಾಜು ಅವರ ನಿವಾಸದ ಮೇಲೆ ಗುರುವಾರ ಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೆಲ ದಾಖಲೆ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳ ತಂಡ ನಗರದ ಶಂಕರಪ್ಪ ಲೇಔಟ್‍ನಲ್ಲಿರುವ ಲಿಂಗರಾಜು ನಿವಾಸಕ್ಕೆ ತೆರಳಿ ತೀವ್ರ ಶೋಧ ನಡೆಸಿತು. ಬೆಳಿಗ್ಗೆ 11 ಗಂಟೆಯಿಂದ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry