‘ರಾಜ್ಯದಲ್ಲೂ ಮರಳು ಗಣಿಗಾರಿಕೆ ಸಂಪೂರ್ಣ ನಿಷೇಧ’

7

‘ರಾಜ್ಯದಲ್ಲೂ ಮರಳು ಗಣಿಗಾರಿಕೆ ಸಂಪೂರ್ಣ ನಿಷೇಧ’

Published:
Updated:

ಬೆಂಗಳೂರು: ರಾಜ್ಯದಲ್ಲೂ ಮರಳು ಗಣಿಗಾರಿಕೆ ಸಂಪೂರ್ಣ ನಿಷೇಧಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.

ಈ ಕುರಿತು ಸಂಬಂಧಿಸಿದವರಿಗೆ ಆದೇಶ ನೀಡಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ಅವರು ತಿಳಿಸಿದರು.

‘ಮರಳು ಗಣಿಗಾರಿಕೆ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ತಮಿಳುನಾಡು, ಕೇರಳದಲ್ಲಿ ನದಿ ಪಾತ್ರದಿಂದ ಮರಳು ತೆಗೆಯಲು ಅವಕಾಶ ಇಲ್ಲ’ ಎಂದರು.

ಮರಳು ಗಣಿಗಾರಿಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂಬ ಕಾರಣಕ್ಕೆ ರಾಜ್ಯದಲ್ಲೂ ಎಂ. ಸ್ಯಾಂಡ್ (ಕೃತಕ ಮರಳು) ಉತ್ಪಾದನೆ ಹೆಚ್ಚಿಸಲಾಗುತ್ತದೆ. ವಿದೇಶಗಳಿಂದ ಮರಳು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry