ಎಫ್‌ಐಆರ್ ರದ್ದುಕೋರಿ ಹೈಕೋರ್ಟ್‌ಗೆ ಆರ್‌.ಅಶೋಕ್‌ ಅರ್ಜಿ

7

ಎಫ್‌ಐಆರ್ ರದ್ದುಕೋರಿ ಹೈಕೋರ್ಟ್‌ಗೆ ಆರ್‌.ಅಶೋಕ್‌ ಅರ್ಜಿ

Published:
Updated:

ಬೆಂಗಳೂರು: ‘ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಬಗರ್ ಹುಕುಂ ಯೋಜನೆಯ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ‍ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ರದ್ದುಗೊಳಿಸಬೇಕು’ ಎಂದು ಕೋರಿ ಶಾಸಕ ಆರ್. ಅಶೋಕ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಅಶೋಕ್‌ ಪರ ವಕೀಲರು ಗುರುವಾರ ನ್ಯಾಯಮೂರ್ತಿ ಕೆ.ಎನ್‌.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಅರ್ಜಿ ವಿಚಾರಣಾ ಪಟ್ಟಿಯಲ್ಲಿ ನಮೂದಾಗಿ ಬರಲಿ. ಆಮೇಲೆ ನೋಡೋಣ’ ಎಂದು ಹೇಳಿದರು.

‘ಬಗರ್ ಹುಕುಂ ಯೋಜನೆಯ ನಿಯಮ ಉಲ್ಲಂಘಿಸಿ ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಶಾಸಕ ಆರ್. ಅಶೋಕ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಭೂಮಿ ಮಂಜೂರು ಮಾಡಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕು’ ಎಂದು  ಕೆಪಿಸಿಸಿ ಸದಸ್ಯ ಎಂ.ಎ. ಸಲೀಂ ಎಸಿಬಿಗೆ ದೂರು ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry